ADVERTISEMENT

19ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ: ಸಚಿವ ಬಿ.ಸಿ.ನಾಗೇಶ್‌

​ಪ್ರಜಾವಾಣಿ ವಾರ್ತೆ
Published 13 ಮೇ 2022, 21:45 IST
Last Updated 13 ಮೇ 2022, 21:45 IST
ಬಿ.ಸಿ.ನಾಗೇಶ್‌
ಬಿ.ಸಿ.ನಾಗೇಶ್‌   

ಮಡಿಕೇರಿ: ‘ಮಾರ್ಚ್‌, ಏಪ್ರಿಲ್‌ನಲ್ಲಿ ನಡೆದಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶವನ್ನು ಮೇ 19ರಂದು
ಪ್ರಕಟಿಸಲಾಗುವುದು’ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಇಲ್ಲಿ ಶುಕ್ರವಾರ ಹೇಳಿದರು.‌

‘ಅಂದು ಬೆಳಿಗ್ಗೆ 10.30ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಸಂಜೆ ವೇಳೆಗೆ ರಾಜ್ಯದ ಎಲ್ಲ ಶಾಲೆಗಳಲ್ಲೂ ಫಲಿತಾಂಶ ದೊರೆಯಲಿದೆ. ಇಲಾಖೆ ವೆಬ್‌ಸೈಟ್‌ನಲ್ಲೂ ಪ್ರಕಟಿಸಲಾಗುವುದು’ ಎಂದು ತಿಳಿಸಿದರು.

‘ಕಲಿಕಾ ಚೇತರಿಕೆ ಕಾರ್ಯಕ್ರಮಕ್ಕೆಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮೇ 16ರಂದು ತುಮಕೂರಿನಲ್ಲಿ ಚಾಲನೆ ನೀಡುವರು. ಕಲಿಕಾ ಚೇತರಿಕೆ ವರ್ಷವಿಡೀ ನಡೆಯಲಿದೆ. ನಿಗದಿಯಂತೆ ಮೇ 16ರಿಂದಲೇ ಶಾಲೆ ಆರಂಭವಾಗಲಿದೆ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.