ADVERTISEMENT

ಮತ್ತೊರ್ವ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಗೂ ಕೋವಿಡ್‌

ಜಿಲ್ಲೆಯಲ್ಲಿ ಮೂವರು ಮಕ್ಕಳಿಗೆ ಸೋಂಕು

​ಪ್ರಜಾವಾಣಿ ವಾರ್ತೆ
Published 1 ಜುಲೈ 2020, 16:33 IST
Last Updated 1 ಜುಲೈ 2020, 16:33 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಉಡುಪಿ: ಬೈಂದೂರು ತಾಲ್ಲೂಕಿನಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಗೆ ಕೋವಿಡ್‌–19 ಸೋಂಕು ತಗುಲಿದೆ. ವಿದ್ಯಾರ್ಥಿನಿಯನ್ನು ಕೋವಿಡ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸೋಮವಾರ ಪೋಷಕರೊಂದಿಗೆ ಪರೀಕ್ಷಾ ಕೇಂದ್ರಕ್ಕೆ ಬಂದ ವಿದ್ಯಾರ್ಥಿನಿಗೆ ಜ್ವರದ ಲಕ್ಷಣ ಕಾಣಿಸಿಕೊಂಡಿತ್ತು. ಕೇಂದ್ರದ ಪ್ರವೇಶದ್ವಾರದಲ್ಲಿದ್ದ ಸಿಬ್ಬಂದಿ ವಿದ್ಯಾರ್ಥಿನಿಗೆ ಕೋವಿಡ್‌ ಪರೀಕ್ಷೆ ಮಾಡಿಸುವಂತೆ ಸೂಚಿಸಿ ಪೋಷಕರೊಂದಿಗೆ ವಾಪಸ್‌ ಕಳುಹಿಸಿದ್ದರು.

ವಿದ್ಯಾರ್ಥಿನಿಯ ಗಂಟಲದ್ರವದ ಪರೀಕ್ಷಾ ವರದಿ ಮಂಗಳವಾರ ರಾತ್ರಿ ಬಂದಿದ್ದು, ಸೋಂಕು ಇರುವುದು ದೃಢಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೂ ಮೂವರು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯರಲ್ಲಿ ಕೋವಿಡ್‌–19 ಸೋಂಕು ಕಾಣಿಸಿಕೊಂಡಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.