ADVERTISEMENT

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಮೇಲೆ ಚಿಕ್ಕಪ್ಪನಿಂದಲೇ ಅತ್ಯಾಚಾರ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2020, 21:01 IST
Last Updated 9 ಏಪ್ರಿಲ್ 2020, 21:01 IST
   

ಧರ್ಮಪುರ (ಹಿರಿಯೂರು ತಾಲ್ಲೂಕು): ಸಮೀಪದ ಗ್ರಾಮವೊಂದರಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಮೇಲೆ ಚಿಕ್ಕಪ್ಪನೇ ಅತ್ಯಾಚಾರ ಎಸಗಿರುವುದು ತಡವಾಗಿ ಬೆಳಕಿಗೆ ಬಂದಿದೆ.

ವಿದ್ಯಾರ್ಥಿನಿಗೆ ಹೊಟ್ಟೆ ನೋವು ಬಂದಿದ್ದರಿಂದ ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಪರೀಕ್ಷೆಗೆ ಒಳಪಡಿಸಿದಾಗ ವಿಷಯ ಗೊತ್ತಾಗಿದೆ.

ಬಾಲಕಿ ಮನೆ ಹತ್ತಿರವೇ ಚಿಕ್ಕಪ್ಪನ ಮನೆ ಇದೆ. ರಜೆ ದಿನಗಳು ಮತ್ತು ಶಾಲೆಯಿಂದ ಮರಳಿದಾಗ ಚಿಕ್ಕಪ್ಪನ ಮನೆ ಹತ್ತಿರ ಹೋಗುತ್ತಿದ್ದಳು. ಮನೆಯಲ್ಲಿ ಯಾರೂ ಇಲ್ಲದಾಗ ನಿರಂತರವಾಗಿ ಕೃತ್ಯಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.