ADVERTISEMENT

ನಾಳೆ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ

​ಪ್ರಜಾವಾಣಿ ವಾರ್ತೆ
Published 29 ಜೂನ್ 2023, 16:09 IST
Last Updated 29 ಜೂನ್ 2023, 16:09 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ ಜೂನ್‌ 30ರಂದು ಬೆಳಿಗ್ಗೆ 11ಕ್ಕೆ ಪ್ರಕಟವಾಗಲಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಜಾಲತಾಣ https://karresults.nic.in ನಲ್ಲಿ ವೀಕ್ಷಿಸಬಹುದು.

ರಾಜ್ಯದ 458 ಕೇಂದ್ರಗಳಲ್ಲಿ ಜೂನ್‌ 12ರಿಂದ 19ರವರೆಗೆ ಪೂರಕ ಪರೀಕ್ಷೆಗಳು ನಡೆದಿದ್ದವು. ರಾಜ್ಯದ 11,810 ಪ್ರೌಢಶಾಲೆಗಳ 1,11,689 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದರು. 2022–23ನೇ ಸಾಲಿನಲ್ಲಿ ಪರೀಕ್ಷೆ ಬರೆದಿದ್ದ 8,35,102 ವಿದ್ಯಾರ್ಥಿಗಳಲ್ಲಿ 1,34,483 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT