ADVERTISEMENT

ಭಯ ಬಿಟ್ಟು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಬನ್ನಿ: ಸುರೇಶ್‌ಕುಮಾರ್‌

ಪಿಯು ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿನಿಗೆ ಕೊರೊನಾ ಇಲ್ಲ

​ಪ್ರಜಾವಾಣಿ ವಾರ್ತೆ
Published 20 ಜೂನ್ 2020, 20:24 IST
Last Updated 20 ಜೂನ್ 2020, 20:24 IST
ಸಚಿವ ಸುರೇಶ್‌ ಕುಮಾರ್‌
ಸಚಿವ ಸುರೇಶ್‌ ಕುಮಾರ್‌   

ಬೆಂಗಳೂರು: ‘ದ್ವಿತೀಯ ಪಿಯು ಇಂಗ್ಲಿಷ್ ವಿಷಯದ ಪರೀಕ್ಷೆಗೆ ನಗರದ ಪರೀಕ್ಷಾ ಕೇಂದ್ರವೊಂದರಲ್ಲಿ ವಿದ್ಯಾರ್ಥಿನಿ ಕ್ವಾರಂಟೈನ್ ಮೊಹರು ಅಳಿಸಿ ಹಾಜರಾಗಿದ್ದಾಳೆಂಬ ಸುದ್ದಿ ಸತ್ಯಕ್ಕೆ ದೂರ. ಈ ವಿದ್ಯಾರ್ಥಿನಿಯ ಕೊರೊನಾ ಪರೀಕ್ಷೆ ‘ನೆಗೆಟಿವ್‌’ ಬಂದಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯವಿಲ್ಲದೆ ಹಾಜರಾಗಬೇಕು’ ಎಂದುಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್‌ ಕುಮಾರ್ ಶನಿವಾರ ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿದ್ಯಾರ್ಥಿನಿ ಪರೀಕ್ಷೆ ಬರೆದ ಕೊಠಡಿಯಲ್ಲಿ ಇತರ ವಿದ್ಯಾರ್ಥಿಗಳು ಭಯಪಡುವ ಅಗತ್ಯವಿಲ್ಲ. ಯಾರೂ ಕ್ವಾರಂಟೈನ್‍ಗೆ ಒಳಗಾಗುವ ಅಗತ್ಯವಿಲ್ಲ. ವಿದ್ಯಾರ್ಥಿನಿ ತಂದೆ ಸಹ ಆರೋಗ್ಯ ಇಲಾಖೆಯ ನಿಗಾದಲ್ಲಿದ್ದಾರೆ. ಈ ಬೆಳವಣಿಗೆಯನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ’ ಎಂದರು.

‘ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿರುವ ಯಾವುದೇ ವಿದ್ಯಾರ್ಥಿಯ ಪೋಷಕರು, ಸಂಬಂಧಿಕರು ಕ್ವಾರಂಟೈನ್‍ಗೆ ಒಳಗಾಗಿದ್ದಲ್ಲಿ ಅಂತಹ ವಿದ್ಯಾರ್ಥಿಗಳಿಗೆ ಈ ಬಾರಿ ಪರೀಕ್ಷೆಗೆ ಹಾಜರಾಗಲು ವಿನಾಯಿತಿ ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪೂರಕ ಪರೀಕ್ಷೆಯಲ್ಲಿ ಹೊಸ ಅಭ್ಯರ್ಥಿಯಾಗೇ ಇವರನ್ನು ಪರಿಗಣಿಸಲಾಗುವುದು’ ಎಂದರು.

ADVERTISEMENT

ಬಿಕ್ಕಟ್ಟಿನ ಸಂದರ್ಭದಲ್ಲಿ ಬಹಳ ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕಾಗಿದೆ. ನಾವೆಲ್ಲರೂ ಸೇರಿ ಸ್ವಾಸ್ಥ ಸಮಾಜವನ್ನು ನಿರ್ಮಿಸುವ ಕೆಲಸ ಮಾಡಬೇಕಾಗಿದೆ. ಸಮಾಜಕ್ಕೆ ಒಂದು ಸಕಾರಾತ್ಮಕ ಸಂದೇಶ ನೀಡಬೇಕಾಗಿದೆ’ ಎಂದು ವಿನಂತಿಸಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.