ADVERTISEMENT

ಪರಿಶಿಷ್ಟ ಪಂಗಡದ ಮಿಸಲಾತಿ ಹೆಚ್ಚಳ: ಆಯೋಗ ರಚನೆ

​ಪ್ರಜಾವಾಣಿ ವಾರ್ತೆ
Published 22 ಜುಲೈ 2019, 19:34 IST
Last Updated 22 ಜುಲೈ 2019, 19:34 IST
ನಾಗಮೋಹನದಾಸ್
ನಾಗಮೋಹನದಾಸ್   

ಬೆಂಗಳೂರು: ಪರಿಶಿಷ್ಟ ಪಂಗಡದ ಜನಾಂಗದವರಿಗೆ ಇದೀಗ ನೀಡುತ್ತಿರುವ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ಕುರಿತು ಸಮಗ್ರ ಅಧ್ಯಯನ ನಡೆಸಿ, 2 ತಿಂಗಳೊಳಗಾಗಿ ವರದಿ ಸಲ್ಲಿಸಲು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಎಚ್.ಎನ್. ನಾಗಮೋಹನದಾಸ್‌ ಅಧ್ಯಕ್ಷತೆಯಲ್ಲಿ ಆಯೋಗ ರಚಿಸಲಾಗಿದೆ.

ಪರಿಶಿಷ್ಟ ಜಾತಿಗಳಿಗೆ ಈಗಿರುವ ಶೇ 15ರ ಮೀಸಲಾತಿಯನ್ನು ಅವರ ಜನಸಂಖ್ಯೆಗೆ ಹೋಲಿಸಿದರೆ ಶೇ 2ರಷ್ಟು ಕಡಿಮೆ ಇದೆ. ಪರಿಶಿಷ್ಟ ಪಂಗಡದವರಿಗೆ ಈಗಿರುವ ಶೇ 3 ಮೀಸಲಾತಿ ಅವರ ಜನಸಂಖ್ಯೆಗೆ ಹೋಲಿಸಿದರೆ ಶೇ 4ರಷ್ಟು ಕಡಿಮೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT