
ಪ್ರಜಾವಾಣಿ ವಾರ್ತೆಹೊಸಪೇಟೆ: ಕೋವಿಡ್‌ನಿಂದ ಮೃತಪಟ್ಟ ಮಹಿಳೆಯೊಬ್ಬರ ಮೃತದೇಹವನ್ನು ಸೈಕಲ್ ರಿಕ್ಷಾದಲ್ಲಿ ಮಲಗಿಸಿ ಇಬ್ಬರು ಆಸ್ಪತ್ರೆ ಸಿಬ್ಬಂದಿ ತಳ್ಳಿಕೊಂಡು ಹೋಗುವ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ನಗರದ 72 ವರ್ಷದ ಮಹಿಳೆ ಸೋಂಕಿನಿಂದ ಬುಧವಾರ ಮೃತಪಟ್ಟಿದ್ದರು. ಶವವನ್ನು ಅಜಾದ್ ನಗರದ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಸಲು ಶವವನ್ನು ರಿಕ್ಷಾದಲ್ಲಿ ಇಟ್ಟುಕೊಂಡು ಇಬ್ಬರು ಸ್ಮಶಾನದ ದಾರಿಯಲ್ಲಿ ತಳ್ಳಿಕೊಂಡು ಹೋಗುವ ದೃಶ್ಯ ವಿಡಿಯೊದಲ್ಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.