ADVERTISEMENT

ನಾಡಗೀತೆ | ಅನಂತಸ್ವಾಮಿ ಧಾಟಿಯೇ ಸಿಂಧು: ಕೃಷ್ಣಮೂರ್ತಿ ಮೇಲ್ಮನವಿ ವಜಾ

​ಪ್ರಜಾವಾಣಿ ವಾರ್ತೆ
Published 6 ಜನವರಿ 2026, 16:08 IST
Last Updated 6 ಜನವರಿ 2026, 16:08 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ ಧಾಟಿಯಲ್ಲಿ ‘ಜಯ ಭಾರತ ಜನನಿಯ ತನುಜಾತೆ...’ ನಾಡಗೀತೆ ಹಾಡುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

‘ನಾಡಗೀತೆಗೆ ಮೈಸೂರು ಅನಂತಸ್ವಾಮಿ ಅವರ ಧಾಟಿಯನ್ನು ಅಳವಡಿಸಿಕೊಂಡು ಅದರ ಪೂ‌ರ್ಣಪಾಠ ಬಳಸಬೇಕು ಹಾಗೂ ಆಲಾಪವಿಲ್ಲದೇ, ಪುನರಾವರ್ತನೆ ಇಲ್ಲದೆ 2 ನಿಮಿಷ 30 ಸೆಕೆಂಡುಗಳಲ್ಲಿ ಹಾಡಬೇಕು’ ಎಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಕಿಕ್ಕೇರಿ ಕೃಷ್ಣಮೂರ್ತಿ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಈ ರಿಟ್‌ ಅರ್ಜಿಯನ್ನು ಸುದೀರ್ಘ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ, ಸರ್ಕಾರ ಹೊರಡಿಸಿದ್ದ ಆದೇಶವನ್ನು ಎತ್ತಿಹಿಡಿದಿತ್ತು. ಏಕಸದಸ್ಯ ನ್ಯಾಯಪೀಠದ ಈ ಆದೇಶವನ್ನು ಪ್ರಶ್ನಿಸಿ ಕಿಕ್ಕೇರಿ ಕೃಷ್ಣಮೂರ್ತಿ ರಿಟ್‌ ಮೇಲ್ಮನವಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ ಅವರಿದ್ದ ವಿಭಾಗೀಯ ನ್ಯಾಯಪೀಠ ಏಕಸದಸ್ಯ ನ್ಯಾಯಪೀಠದ ತೀರ್ಪನ್ನು ಕಾಯಂಗೊಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.