ADVERTISEMENT

ಮಾರ್ಚ್‌ 8ಕ್ಕೆ ರಾಜ್ಯ ಬಜೆಟ್‌

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2021, 21:14 IST
Last Updated 18 ಫೆಬ್ರುವರಿ 2021, 21:14 IST
   

ಬೆಂಗಳೂರು: ಮಾರ್ಚ್‌ 4 ರಿಂದ ರಾಜ್ಯ ಬಜೆಟ್‌ ಅಧಿವೇಶನ ಆರಂಭವಾಗಲಿದ್ದು, ಮಾ.8 ರಂದು ಬಜೆಟ್‌ ಮಂಡಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.

ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ಮಾರ್ಚ್‌ ಕೊನೆಯವರೆಗೆ ಕಲಾಪ ನಡೆಯಲಿದೆ. ಮಾ.4 ಮತ್ತು 5 ರಂದು ‘ಒಂದು ದೇಶ ಒಂದು ಚುನಾವಣೆ’ ಕುರಿತು ಚರ್ಚೆ ನಡೆಸಲಾಗುವುದು ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.