ADVERTISEMENT

ಬೆಂಗಳೂರು ಅರಮನೆ ಮೈದಾನದಲ್ಲಿ ರಾಜ್ಯ ಕಾಂಗ್ರೆಸ್ ಮುಖಂಡರ ಸಭೆ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2020, 10:53 IST
Last Updated 27 ಸೆಪ್ಟೆಂಬರ್ 2020, 10:53 IST
ರಾಜ್ಯ ಕಾಂಗ್ರೆಸ್‌ ನಾಯಕರು
ರಾಜ್ಯ ಕಾಂಗ್ರೆಸ್‌ ನಾಯಕರು    

ಬೆಂಗಳೂರು: ರಾಜ್ಯ ಕಾಂಗ್ರೆಸ್ ಮುಖಂಡರ ಸಭೆ ಅರಮನೆ ಮೈದಾನದಲ್ಲಿ ನಡೆಯುತ್ತಿದೆ.

ರಾಜ್ಯಸಭೆಯ ಕಾಂಗ್ರೆಸ್ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಶಾಸಕ ಜಿ.ಪರಮೇಶ್ವರ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಮಾನಾಥ ರೈ, ಆರ್.ವಿ ದೇಶಪಾಂಡೆ, ಕೆ. ಎಚ್ ಮುನಿಯಪ್ಪ, ಎಚ್ .ಕೆ.ಪಾಟೀಲ, ಡಿ.ಕೆ.ಸುರೇಶ್, ಎಸ್.ಆರ್.ಪಾಟೀಲ ಸೇರಿದಂತೆ ಹಿರಿಯ ನಾಯಕರು ಸಭೆಯಲ್ಲಿದ್ದಾರೆ.

ಪಕ್ಷದ ಹಾಲಿ, ಮಾಜಿಶಾಸಕರು, ಸಂಸದರು, ಪರಿಷತ್ ಸದಸ್ಯರು, ಲೋಕಸಭೆ, ವಿಧಾನಸಭೆ ಪರಾಜಿತ ಅಭ್ಯರ್ಥಿಗಳು ಇದ್ದಾರೆ. ಪಕ್ಷದ ಜಿಲ್ಲಾಧ್ಯಕ್ಷರು, ಮುಂಚೂಣಿ ಘಟಕಗಳ ಮುಖಂಡರು ಸೇರಿ300 ಕ್ಕೂ ಹೆಚ್ಚು ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.