ADVERTISEMENT

Karnataka Covid Update | ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಮುಖ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2022, 16:31 IST
Last Updated 1 ಮಾರ್ಚ್ 2022, 16:31 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಮಂಗಳವಾರವೂ ಇಳಿಮುಖವಾಗಿದೆ. 4,847 ಸೋಂಕಿತರು ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರ5,623 ಸಕ್ರಿಯ ಪ್ರಕರಣಗಳು ವರದಿಯಾಗಿದ್ದವು.

ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ 202ಕ್ಕೆ, ಸೋಂಕು ದೃಢ ಪ್ರಮಾಣವೂ ಶೇ 0.50ಕ್ಕೆ ಇಳಿಕೆಯಾಗಿದೆ.

ಬಾಗಲಕೋಟೆ, ಚಾಮರಾಜನಗರ, ಚಿಕ್ಕಬಳ್ಳಾಪುರ, ಧಾರವಾಡ, ಹಾವೇರಿ, ಕಲಬುರಗಿ, ಕೊಡಗು, ಕೊಪ್ಪಳ, ಮಂಡ್ಯ, ರಾಯಚೂರು, ರಾಮನಗರ, ಯಾದಗಿರಿ ಜಿಲ್ಲೆಗಳಲ್ಲಿ ಸೋಂಕು ಪ್ರಕರಣಗಳು ವರದಿಯಾಗಿಲ್ಲ.

ADVERTISEMENT

ಬೆಂಗಳೂರು, ಉಡುಪಿ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಒಂದಂಕಿಗೆ ಇಳಿದಿದೆ. ಬೆಂಗಳೂರಿನಲ್ಲಿ 150 ಸೋಂಕು ಪ್ರಕರಣಗಳು ದೃಢಪಟ್ಟಿವೆ. ಈವರೆಗೆ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ39.41 ಲಕ್ಷಕ್ಕೆ ಏರಿಕೆಯಾಗಿದೆ.

ಸೋಂಕಿತರ ಪೈಕಿ ಬೆಂಗಳೂರಿನಲ್ಲಿ 393 ಮಂದಿ ಸೇರಿದಂತೆ ರಾಜ್ಯದಲ್ಲಿ 791 ಮಂದಿ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಈವರೆಗೆ ಗುಣಮುಖರಾದವರ ಒಟ್ಟು ಸಂಖ್ಯೆ 38.96 ಲಕ್ಷಕ್ಕೆ ತಲುಪಿದೆ.

ಸೋಂಕಿತರಲ್ಲಿ 7 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ 3, ರಾಯಚೂರು, ದಾವಣಗೆರೆ, ದಕ್ಷಿಣ ಕನ್ನಡ, ಬಳ್ಳಾರಿಯಲ್ಲಿ ತಲಾ ಒಬ್ಬರುಸಾವಿಗೀಡಾಗಿದ್ದಾರೆ.

ರಾಜ್ಯದಲ್ಲಿ ಮರಣ ಪ್ರಮಾಣ ದರವು ಶೇ 3.47ರಷ್ಟು ವರದಿಯಾಗಿದೆ. ಈವರೆಗೆಕೋವಿಡ್‌ಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 39,957ಕ್ಕೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.