ADVERTISEMENT

ಜ.21ರಂದು ರಾಜ್ಯದಾದ್ಯಂತ ‘ದಾಸೋಹ ದಿನ’ ಆಚರಿಸಲು ಸರ್ಕಾರ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2021, 22:38 IST
Last Updated 3 ಸೆಪ್ಟೆಂಬರ್ 2021, 22:38 IST
ಶಿವಕುಮಾರ ಸ್ವಾಮೀಜಿ
ಶಿವಕುಮಾರ ಸ್ವಾಮೀಜಿ   

ಬೆಂಗಳೂರು: ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರಸ್ವಾಮೀಜಿ ಅವರು ಲಿಂಗೈಕ್ಯರಾದ ಜನವರಿ 21ರಂದುರಾಜ್ಯದಾದ್ಯಂತ ‘ದಾಸೋಹ ದಿನ’ ಆಚರಿಸಲು ನಿರ್ಧರಿಸಿರುವ ರಾಜ್ಯ ಸರ್ಕಾರ, ಈ ಸಂಬಂಧ ರೂಪುರೇಷೆ ಸಿದ್ಧಪಡಿಸಿಕೊಳ್ಳಲು ಆದೇಶ ಹೊರಡಿಸಿದೆ.

ದಾಸೋಹ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ಸಂಬಂಧಪಟ್ಟ ಇಲಾಖೆಗಳು ಸಿದ್ಧತೆ ಮಾಡಿಕೊಂಡು ಕಾರ್ಯಕ್ರಮ ಜಾರಿಗೊಳಿಸಲು ಅಗತ್ಯ ಕ್ರಮ ವಹಿಸುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT