ADVERTISEMENT

ಕಂಪ್ಯೂಟರ್‌ ಸಾಕ್ಷರತಾ ಪರೀಕ್ಷೆ: ಡಿಸೆಂಬರ್‌ವರೆಗೆ ಗಡುವು‌ ನೀಡಿದ ರಾಜ್ಯ ಸರ್ಕಾರ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2022, 19:30 IST
Last Updated 9 ನವೆಂಬರ್ 2022, 19:30 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ದಾವಣಗೆರೆ: ನೌಕರರು ಡಿಸೆಂಬರ್‌ ಅಂತ್ಯದೊಳಗೆ ಕಂಪ್ಯೂಟರ್‌ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು ಎಂದು ರಾಜ್ಯ ಸರ್ಕಾರ ಗಡುವು ನೀಡಿದೆ.

ಈ ಸಂಬಂಧ ಆದೇಶ ಹೊರಡಿಸಿರುವ ಸರ್ಕಾರ, ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗದಿದ್ದರೆ ಸೇವಾ ಬಡ್ತಿ, ವೇತನ ಬಡ್ತಿಯನ್ನು ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ. 50 ವರ್ಷ ದಾಟಿದ ನೌಕರರಿಗೆ ಈ ಪರೀಕ್ಷೆಯಿಂದ ವಿನಾಯಿತಿ ನೀಡಲಾಗಿದೆ.

‘ಇತ್ತೀಚೆಗೆ ನೌಕರಿಗೆ ಸೇರಿದವರು ಕಂಪ್ಯೂಟರ್‌ ಜ್ಞಾನ ಹೊಂದಿದ್ದಾರೆ. ಆದರೆ, 20–25 ವರ್ಷಗಳ ಸೇವಾವಧಿ ಪೂರೈಸಿರುವ ಅನೇಕರು ಮೂರ್ನಾಲ್ಕು ಬಾರಿ ಪರೀಕ್ಷೆ ಬರೆದರೂ ಉತ್ತೀರ್ಣರಾಗಿಲ್ಲ. ಹಾಗಾಗಿ, ಡಿಸೆಂಬರ್‌ 31ರೊಳಗೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕೆಂಬ ಗಡುವನ್ನು ವಿಸ್ತರಿಸಬೇಕು’ ಎಂದು ಇಲ್ಲಿ ಹೆಡ್‌ ಕಾನ್‌ಸ್ಟೆಬಲ್‌ ಆಗಿರುವ ಎಸ್‌.ಗಿರೀಶ್‌ ಹೇಳಿದರು.

ADVERTISEMENT

‘ಕಂಪ್ಯೂಟರ್‌ ಜ್ಞಾನ ಈಗಿನ ಕಾಲಕ್ಕೆ ಅನಿವಾರ್ಯ. ಸರ್ಕಾರಿ ನೌಕರರಿಗೆ ಕಂಪ್ಯೂಟರ್‌ ಸಾಕ್ಷರತಾ ಪರೀಕ್ಷೆ ಕಡ್ಡಾಯ ಮಾಡಿದ್ದು ತಪ್ಪಲ್ಲ. ಆದರೆ, ಸೂಕ್ತ ತರಬೇತಿ ನೀಡುವ ವ್ಯವಸ್ಥೆಯಾಗಬೇಕು’ ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ. ಫಾಲಾಕ್ಷಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.