ದೇವದುರ್ಗ: (ರಾಯಚೂರು ಜಿಲ್ಲೆ): ‘ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ಕೊಟ್ಟು ಶಾಸಕರ ಹಕ್ಕುಗಳನ್ನು ಕಸಿದುಕೊಂಡಿದೆ. ಹಾಗಾಗಿ ಸ್ವಪಕ್ಷೀಯ ಶಾಸಕರೇ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ’ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಆರೋಪಿಸಿದರು.
ದೇವದುರ್ಗದಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಶಾಸಕರಿಗೆ ಶಾಸನಬದ್ಧ ಅನುದಾನವೂ ದೊರೆಯುತ್ತಿಲ್ಲ. ಕ್ಷೇತ್ರದ ಜನರಿಗೆ ಉತ್ತರಿಸದೆ ರಾಜ್ಯದ ಶಾಸಕರು ಅಸಹಾಯಕರಾಗಿದ್ದಾರೆ’ ಎಂದು ದೂರಿದರು.
‘ಕಾಂಗ್ರೆಸ್ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ. ಅಲ್ಪಸಂಖ್ಯಾತರ ಮುಸ್ಲಿಮರಿಗೆ ಶೇ 4 ಮೀಸಲಾತಿ ಕಲ್ಪಿಸಿದ್ದು ನಾನು. ಜಾತ್ಯತೀತ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ ಇಲ್ಲ. ಹಿಮಾಚಲ ಪ್ರದೇಶ, ತೆಲಂಗಾಣ ಮತ್ತು ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಜನರ ವಿಶ್ವಾಸ ಕಳೆದುಕೊಂಡಿದೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.