ADVERTISEMENT

ಸಚಿವರ ವರ್ಷದ ವೇತನ ಕೋವಿಡ್‌ ಪರಿಹಾರ ನಿಧಿಗೆ ದೇಣಿಗೆ: ರಾಜ್ಯ ಸರ್ಕಾರ ಆದೇಶ

​ಪ್ರಜಾವಾಣಿ ವಾರ್ತೆ
Published 13 ಮೇ 2021, 19:30 IST
Last Updated 13 ಮೇ 2021, 19:30 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ಎಲ್ಲ ಸಚಿವರ ಒಂದು ವರ್ಷದ ವೇತನವನ್ನು ಕೋವಿಡ್‌ ಪರಿಹಾರ ನಿಧಿಗೆ ದೇಣಿಗೆಯಾಗಿ ಪಾವತಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ, ನಿಧಿಗೆ ವೇತನವನ್ನು ದೇಣಿಗೆ ನೀಡುವ ಕುರಿತು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ (ಡಿಪಿಎಆರ್‌) ಮೇ 3ರಂದು ಸೂಚಿಸಿದ್ದರು.

ಈ ಮೇ 1ರಿಂದ ಅನ್ವಯಿಸುವಂತೆ ಸಚಿವರ ವೇತನವನ್ನು ಕೋವಿಡ್‌ ಪರಿಹಾರ ನಿಧಿಗೆ ಪಾವತಿಸಿ ಆದೇಶ ಹೊರಡಿಸಲಾಗಿದೆ.

ADVERTISEMENT

ಗೃಹ ಸಚಿವರ ಮನೆ ಆವರಣದಲ್ಲಿ ಆರೈಕೆ ಕೇಂದ್ರ
ಶಿಗ್ಗಾವಿ:
ಕೋವಿಡ್ ಪೀಡಿತರ ಪ್ರಾಥಮಿಕ ಚಿಕಿತ್ಸೆಗಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಇಲ್ಲಿನ ಮನೆಯ ಆವರಣದಲ್ಲಿ 50 ಹಾಸಿಗೆಗಳ ಕೋವಿಡ್ ಆರೈಕೆ ಕೇಂದ್ರ ಸ್ಥಾಪಿಸಲಾಗಿದೆ.

‘ಚಿಕಿತ್ಸೆ ನೀಡಲು ಈಗಾಗಲೇ ವೈದ್ಯರನ್ನೂ ನಿಯೋಜಿಸಲಾಗಿದೆ. ರೋಗಿಗಳು ಬಂದ ತಕ್ಷಣ ಚಿಕಿತ್ಸೆ ಆರಂಭಿಸುವ ಎಲ್ಲ ವ್ಯವಸ್ಥೆ ಮಾಡಲಾಗಿದೆ’ ಎಂದು ಗುರುವಾರ ಈ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಚಿವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.