ADVERTISEMENT

ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಮೇ 15ರಿಂದ

​ಪ್ರಜಾವಾಣಿ ವಾರ್ತೆ
Published 12 ಮೇ 2025, 15:22 IST
Last Updated 12 ಮೇ 2025, 15:22 IST
<div class="paragraphs"><p>ವರ್ಗಾವಣೆ</p></div>

ವರ್ಗಾವಣೆ

   

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಸಂಬಂಧಿಸಿದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆಗಳ ಇಲಾಖೆ ಅಧಿಕೃತ ಆದೇಶ ಹೊರಡಿಸಿದ್ದು, ಇದೇ 15 ರಿಂದ ಜೂನ್‌ 14 ರವರೆಗೆ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ.

ಈ ಸಾಲಿನಲ್ಲಿ  ಗ್ರೂಪ್‌–ಎ, ಗ್ರೂಪ್‌–ಬಿ, ಗ್ರೂಪ್‌–ಸಿ, ಮತ್ತು ಗ್ರೂಪ್‌– ಡಿ ಹುದ್ದೆಗಳಿಗೆ ಮಾಡಲಾಗುವ ವರ್ಗಾವಣೆಗಳ ಸಂಖ್ಯೆಯು ಆಯಾ ವೃಂದಗಳ ಕಾರ್ಯನಿರತ ವೃಂದ ಬಲದ ಶೇ 6 ಅನ್ನು ಮೀರಬಾರದು. ಆದ್ದರಿಂದ, ಗ್ರೂಪ್‌–ಎ, ಗ್ರೂಪ್‌–ಬಿ ವೃಂದದ ಅಧಿಕಾರಿಗಳಿಗೆ ಸಂಬಂಧಿಸಿದಂತೆ  ಆಯಾ ಇಲಾಖೆ ಸಚಿವರಿಗೆ ಹಾಗೂ ಗ್ರೂಪ್‌–ಸಿ ಮತ್ತು ಗ್ರೂಪ್‌–ಡಿ ವೃಂದದ ನೌಕರರಿಗೆ ಸಂಬಂಧಿಸಿದಂತೆ ಆಯಾ ನೇಮಕಾತಿ ಪ್ರಾಧಿಕಾರಗಳಿಗೆ ಅಧಿಕಾರ ನೀಡಲಾಗಿದೆ.

ADVERTISEMENT

ಎ ಮತ್ತು ಬಿ ವೃಂದದ ಹುದ್ದೆಗಳಲ್ಲಿ 2 ವರ್ಷ, ಸಿ ವೃಂದದ ಹುದ್ದೆಯಲ್ಲಿ 4 ವರ್ಷ ಹಾಗೂ ಡಿ ವೃಂದದ ಹುದ್ದೆಗಳಲ್ಲಿ 7 ವರ್ಷ ಪೂರ್ಣಗೊಳಿಸಿದವರನ್ನು ವರ್ಗಾವಣೆ ಮಾಡಬಹುದಾಗಿದೆ. ಎ ಮತ್ತು ಬಿ ವೃಂದದ ಅಧಿಕಾರಿಗಳಿಗೆ ಸಂಬಂಧಿಸಿದ ವರ್ಗಾವಣೆ ಪ್ರಸ್ತಾವನೆಗಳನ್ನು ಸಚಿವಾಲಯದ ಆಡಳಿತ ಇಲಾಖೆಗಳ ಮೂಲಕವೇ ಸಚಿವರಿಗೆ ಸಲ್ಲಿಸಬೇಕು.

ಹೈದರಾಬಾದ್‌ ಕರ್ನಾಟಕ ಪ್ರದೇಶದ ಕಚೇರಿಗಳಲ್ಲಿ ವಿವಿಧ ವೃಂದಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆದುರಾಗಿ ನೇಮಕಗೊಂಡ ನೌಕರರನ್ನು ಅವರ ನೇಮಕಾತಿ ದಿನಾಂಕದಿಂದ ಕನಿಷ್ಠ 10 ವರ್ಷಗಳವರೆಗೆ ಹೈದರಾಬಾದ್‌ ಕರ್ನಾಟಕ ಪ್ರದೇಶ ಹೊರತುಪಡಿಸಿ ಬೇರೆಡೆ ವರ್ಗಾವಣೆ ಮಾಡುವಂತಿಲ್ಲ ಎಂದು ಆದೇಶ ಸ್ಪಷ್ಟಪಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.