ನವದೆಹಲಿ: ‘ಕೇಂದ್ರದಿಂದ ರಾಜ್ಯಕ್ಕೆ ₹4,195 ಕೋಟಿ ಅನುದಾನ ಬಾಕಿಯಿದೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬೂಟಾಟಿಕೆ ಪ್ರದರ್ಶಿಸುತ್ತಿದ್ದಾರೆ’ ಎಂದು ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ ನಡೆಸಿದರು.
ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ಅವರು ತಮ್ಮ ಸರ್ಕಾರದ ಆರ್ಥಿಕ ದುರುಪಯೋಗ, ಆಡಳಿತ ವೈಫಲ್ಯ, ಅಸಮರ್ಥತೆ ಒಪ್ಪಿಕೊಳ್ಳುವುದನ್ನು ಬಿಟ್ಟು ಕೇಂದ್ರದ ಮೇಲೆ ವೃಥಾ ಆರೋಪ ಹೊರಿಸುತ್ತಿದ್ದಾರೆ. ಜನರಿಗೆ ನೀಡಿದ ಭರವಸೆ ಈಡೇರಿಸುವಲ್ಲಿ ವಿಫಲರಾಗಿದ್ದಾರೆ’ ಎಂದು ಟೀಕಿಸಿದರು.
‘ಪಿಎಂಎವೈ (ಗ್ರಾಮೀಣ), ಸ್ವಚ್ಛ ಭಾರತ ಮಿಷನ್ (ನಗರ), ಅಮೃತ್, ಪೋಷಣ್, ಸಮಗ್ರ ಶಿಕ್ಷಣ ಮುಂತಾದ ಅನೇಕ ಪ್ರಮುಖ ಯೋಜನೆಗಳು ಸೇರಿದಂತೆ ವಿವಿಧ ಕೇಂದ್ರ ಪ್ರಾಯೋಜಿತ ಯೋಜನೆಗಳ ಅಡಿಯಲ್ಲಿ ಮಂಜೂರಾಗಿರುವ ₹5,000 ಕೋಟಿಗೂ ಹೆಚ್ಚು ಅನುದಾನವನ್ನು ರಾಜ್ಯ ಬಳಸಿಲ್ಲ. ಮೊದಲು ಅದನ್ನು ಬಳಸಲಿ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.