ADVERTISEMENT

ಮಸ್ಕಿಯಲ್ಲಿ ರಾಜ್ಯ ನಾಯಕರ ಪ್ರಚಾರ ಭರಾಟೆ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2021, 5:33 IST
Last Updated 5 ಏಪ್ರಿಲ್ 2021, 5:33 IST
   

ರಾಯಚೂರು: ಮಸ್ಕಿ ಉಪಚುನಾವಣೆ ಪ್ರಚಾರಕ್ಕಾಗಿ ಕಾಂಗ್ರೆಸ್ ಮತ್ತು ಬಿಜೆಪಿಯಿಂದ ರಾಜ್ಯ ನಾಯಕರು ಬಂದಿದ್ದು, ಅಬ್ಬರ ಜೋರಾಗಿದೆ.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಸನಗೌಡ ತುರ್ವಿಹಾಳ ಪರವಾಗಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ದ್ರುವನಾರಾಯಣ, ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಹಾಗೂ ಸ್ಥಳೀಯ ನಾಯಕರು ಪ್ರಚಾರ ಆರಂಭಿಸಿದ್ದಾರೆ.

ಮಸ್ಕಿ‌ ಕ್ಷೇತ್ರ ವ್ಯಾಪ್ತಿಯ ಸಿಂಧನೂರು ತಾಲ್ಲೂಕಿನ ತುರ್ವಿಹಾಳ, ಗುಂಜಳ್ಳಿ, ವಿರೂಪಾಪುರದಲ್ಲಿ ಕಾಂಗ್ರೆಸ್ ಪ್ರಚಾರ ಸಭೆ ಆಯೋಜಿಸಲಾಗಿದೆ.

ADVERTISEMENT

ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪರ ಪ್ರಚಾರಕ್ಕೆ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ನಾಲ್ಕು ದಿನಗಳಿಂದ ವಾಸ್ತವ್ಯ ಹೂಡಿದ್ದು, ಪ್ರತಿದಿನ 10 ಗ್ರಾಮಗಳಿಗೆ ಭೇಟಿ ನೀಡುತ್ತಿದ್ದಾರೆ. ಸೋಮವಾರ ಮತ್ತಷ್ಟು ನಾಯಕರು ಜೊತೆಯಾಗಿದ್ದಾರೆ.
ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಶಾಸಕ ರೇಣುಕಾಚಾರ್ಯ ಆಗಮಿಸಿದ್ದಾರೆ. ಕೊಳಬಾಳ, ಗುಡದೂರ, ಗೌಡನವಾವಿ, ಉದ್ಭಾಳ, ಹಾಲಾಪುರ, ಇರಕಲ್, ತೋರಣದಿನ್ನಿ, ಹಿರೇದಿನ್ನಿ, ಮಲ್ಲದಗುಡ್ಡ, ಉಟಕನೂರು ಗ್ರಾಮಗಳಲ್ಲಿ ಪ್ರಚಾರಸಭೆ ನಡೆಯಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.