ADVERTISEMENT

’ಯಡಿಯೂರಪ್ಪ ಅವರನ್ನು ಯಾರೂ ನಂಬಲ್ಲ; ಜನರು ಆಶೀರ್ವಾದ ಮಾಡಿದರೆ ಸಿಎಂ ಆಗಬಾರದೇಕೆ‌‘

ಬಿಎಸ್‌ವೈ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

​ಪ್ರಜಾವಾಣಿ ವಾರ್ತೆ
Published 14 ಮೇ 2019, 5:27 IST
Last Updated 14 ಮೇ 2019, 5:27 IST
ಸಿದ್ದರಾಮಯ್ಯ ಹಾಗೂ ಬಿ.ಎಸ್‌.ಯಡಿಯೂರಪ್ಪ
ಸಿದ್ದರಾಮಯ್ಯ ಹಾಗೂ ಬಿ.ಎಸ್‌.ಯಡಿಯೂರಪ್ಪ   

ಹುಬ್ಬಳ್ಳಿ: ‘ಸರ್ಕಾರ ಪತನವಾಗಲಿದೆ ನಾನು ಮುಖ್ಯಮಂತ್ರಿ ಆಗುತ್ತೇನೆ ಎಂಬ ಯಡಿಯೂರಪ್ಪ ಮಾತನ್ನು ಜನ ನಂಬುವುದಿಲ್ಲ. 104 ಸ್ಥಾನದೊಂದಿಗೆ ‌ಪ್ರಮಾಣವಚನ ಸ್ವೀಕರಿಸಿ ಬಹುಮತ ಸಾಬೀತು ಮಾಡಲಾಗದೆ ರಾಜೀನಾಮೆ ನೀಡಿದಅವರಿಗೆ‌ ನಾಚಿಕೆ ಆಗಬೇಕು’ ಎಂದು ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದರು.

ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಒಂದು ಬಾರಿ‌‌ ಹೇಳಿದರೆ ಅದನ್ನು ಜನ ನಂಬುತ್ತಾರೆ, ಪದೇ ಪದೇ ಅದನ್ನೇ ಹೇಳುತ್ತಿದ್ದರೆ ಯಾರೂ ನಂಬುವುದಿಲ್ಲ ಗಂಭೀರವಾಗಿ ಸಹ ಪರಿಗಣಿಸುವುದಿಲ್ಲ’ ಎಂದರು.

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುತ್ತಾರೆ ಎಂದು ಕೆಲವು ಬೆಂಬಲಿಗರು ಹೇಳುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ನಿಲ್ಲುವುದಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದು ಅದಕ್ಕೆ ಈಗಲೂ ಬದ್ಧನಾಗಿದ್ದೇನೆ ಎಂದರು.

ADVERTISEMENT

ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎನ್ನುತ್ತೀರ ಮುಂದೆ ಸಿಎಂ‌ ಆದರೆ ಹತ್ತು ಕೆಜಿ‌ ಅಕ್ಕಿ‌ನೀಡುತ್ತೇನೆ ಎಂದೂ ಹೇಳುತ್ತೀರ ಇದು ಗೊಂದಲ‌ ಅಲ್ಲವೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು,‘ಸಾರ್ವಜನಿಕ ಸಭೆಗಳಲ್ಲಿ ಅಭಿಮಾನಿಗಳು ನೀವೇ ಮುಖ್ಯಮಂತ್ರಿ ಆಗಬೇಕು ಎಂದಾಗ, ಸಾಂದರ್ಭಿಕವಾಗಿ‌ ಪ್ರತಿಕ್ರಿಯೆ ನೀಡಿದ್ದೇನೆ. ಜನರು ಆಶೀರ್ವಾದ ಮಾಡಿದರೆ ಸಿಎಂ ಆಗಬಾರದೇಕೆ‌’ ಎಂದು ಪ್ರಶ್ನಿಸಿದರು.

ಜೆಡಿಎಸ್ ಅಧ್ಯಕ್ಷ ವಿಶ್ವನಾಥ ಅವರ ಹೇಳಿಕೆ ಬಗ್ಗೆ ಸಮನ್ವಯ ಸಮಿತಿಯಲ್ಲಿ ಮಾತನಾಡುತ್ತೇನೆ ಎಂದರು.

ಐಟಿ ದಾಳಿ ಬಗ್ಗೆ ಆಕ್ಷೇಪ‌ ಇಲ್ಲ. ಆದರೆ‌ಮಾಡಿದ ಸಂದರ್ಭ ಯಾವುದು ಎಂಬುದು ಮುಖ್ಯ. ಜಗದೀಶ ಶೆಟ್ಟರ್, ಯಡಿಯೂರಪ್ಪ ಅವರು ಉಳಿದಿದ್ದ ಹೋಟೆಲ್ ಕೊಠಡಿ‌ ಮೇಲೆ ಯಾಕೆ ದಾಳಿ‌ನಡೆಸಲಿಲ್ಲ ಎಂದು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.