ADVERTISEMENT

ಶಾಸಕರ ರಾಜೀನಾಮೆ ಶೀಘ್ರದಲ್ಲೇ ವಾಪಸ್‌: ಡಿ.ಕೆ. ಶಿವಕುಮಾರ್‌

‘ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ಧಕ್ಕೆ ಇಲ್ಲ’

​ಪ್ರಜಾವಾಣಿ ವಾರ್ತೆ
Published 2 ಜುಲೈ 2019, 19:30 IST
Last Updated 2 ಜುಲೈ 2019, 19:30 IST
ಮದ್ದೂರು ತಾಲ್ಲೂಕು ಸೋಮಹಳ್ಳಿಯಲ್ಲಿ ಎಸ್.ಎಂ.ಶಂಕರ್ ಅವರ ಉತ್ತರ ಕ್ರಿಯಾದಿ ಕಾರ್ಯಕ್ಕೆ ಬಂದಿದ್ದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಮ್ಮ ರಾಜಕೀಯ ಗುರು, ಬಿಜೆಪಿ ಮುಖಂಡ ಎಸ್.ಎಂ.ಕೃಷ್ಣ ಅವರ ಕಾಲಿಗೆ ನಮಸ್ಕರಿಸಿದರು
ಮದ್ದೂರು ತಾಲ್ಲೂಕು ಸೋಮಹಳ್ಳಿಯಲ್ಲಿ ಎಸ್.ಎಂ.ಶಂಕರ್ ಅವರ ಉತ್ತರ ಕ್ರಿಯಾದಿ ಕಾರ್ಯಕ್ಕೆ ಬಂದಿದ್ದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಮ್ಮ ರಾಜಕೀಯ ಗುರು, ಬಿಜೆಪಿ ಮುಖಂಡ ಎಸ್.ಎಂ.ಕೃಷ್ಣ ಅವರ ಕಾಲಿಗೆ ನಮಸ್ಕರಿಸಿದರು   

ಮದ್ದೂರು (ಮಂಡ್ಯ ಜಿಲ್ಲೆ): ‘ಆನಂದ ಸಿಂಗ್‌ ಹಾಗೂ ರಮೇಶ ಜಾರಕಿಹೊಳಿ ಅವರ ಮನವೊಲಿಸಲಾಗಿದ್ದು, ಶೀಘ್ರದಲ್ಲೇ ರಾಜೀನಾಮೆ ವಾಪಸ್‌ ಪಡೆಯಲಿದ್ದಾರೆ’ ಎಂದು ಮಂಗಳವಾರ ಇಲ್ಲಿ ಭರವಸೆ ವ್ಯಕ್ತಪಡಿಸಿದ ಸಚಿವ ಡಿ.ಕೆ.ಶಿವಕುಮಾರ್, ಶಾಸಕರ ರಾಜೀನಾಮೆಗೆ ಯಾರು ಕಾರಣ ಎಂಬುದರ ಮಾಹಿತಿ ತಮಗಿದೆ ಎಂದರು.

ತಾಲ್ಲೂಕಿನ ಸೋಮನಹಳ್ಳಿಯಲ್ಲಿ ಬಿಜೆಪಿ ಮುಖಂಡ ಎಸ್‌.ಎಂ.ಕೃಷ್ಣ ಅವರ ಸೋದರ, ಎಸ್‌.ಎಂ.ಶಂಕರ ಅವರ ಉತ್ತರ ಕ್ರಿಯಾದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು, ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಆಪರೇಷನ್ ಕಮಲದಿಂದ ಸಮ್ಮಿಶ್ರ ಸರ್ಕಾರವನ್ನು ಅಭದ್ರ ಮಾಡಬಹುದು ಎಂದು ಬಿಜೆಪಿಯವರು ಅಂದುಕೊಂಡರೆ ಅದು ಅವರ ಭ್ರಮೆ. ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ಧಕ್ಕೆಯಾಗುವುದಿಲ್ಲ. ಸರ್ಕಾರ ಸುಭದ್ರವಾಗಿರಲಿದೆ. ಇದರಿಂದ ಬಿಜೆಪಿಯವರಿಗೆ ಯಾವುದೇ ಪ್ರಯೋಜನವಾಗುವುದಿಲ್ಲ’ ಎಂದು ಹೇಳಿದರು.

ADVERTISEMENT

ಎಸ್‌.ಎಂ. ಕೃಷ್ಣ ಕಾಲಿಗೆರಗಿದ ಸಚಿವ
ಎಸ್.ಎಂ.ಶಂಕರ್ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಹಾಜರಿದ್ದ ತಮ್ಮ ರಾಜಕೀಯ ಗುರು ಎಸ್.ಎಂ. ಕೃಷ್ಣ ಅವರ ಕಾಲಿಗೆ ನಮಸ್ಕರಿಸಿದ ಸಚಿವ ಡಿ.ಕೆ. ಶಿವಕುಮಾರ್‌, ಅವರ ಜೊತೆ ಭೋಜನ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.