ಹರಿಹರ: ಹಾಲುಮತ ಹಾಗೂ ವಾಲ್ಮೀಕಿ ಸಮುದಾಯ ಒಂದಾದರೆ ರಾಜ್ಯದ ಈ ಸಮುದಾಯದವರು ರಾಜ್ಯದ ಚುಕ್ಕಾಣಿ ಹಿಡಿಯಬಹುದು. ಮುಂದಿನ ದಿನಗಳಲ್ಲಿ ಸತೀಶ ಜಾರಕಿಹೊಳಿ ಮುಖ್ಯಮಂತ್ರಿ ಆಗುತ್ತಾರೆ ಎಂದು ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ವಿಶ್ವಾಸ ವ್ಯಕ್ತಪಡಿಸಿದರು.
ಹರಿಹರದ ರಾಜನಹಳ್ಳಿಯಲ್ಲಿ ಶನಿವಾರ ನಡೆದ ವಾಲ್ಮೀಕಿ ಜಾತ್ರೆಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ಈ ಎರಡು ಸಮಾಜದ ಮುಖಂಡರು ಮನಸ್ತಾಪವನ್ನು ನಾಲ್ಕು ಗೋಡೆಗಳ ನಡುವೆ ಕುಳಿತು ಬಗೆಹರಿಸಿಕೊಳ್ಳಬೇಕು. ಆಗ ಸಾಮಾಜಿಕ ಹಾಗೂ ರಾಜಕೀಯ ನ್ಯಾಯ ಪಡೆಯಲು ಸಾಧ್ಯವಿದೆ ಎಂದು ಅಭಿಪ್ರಾಯಪಟ್ಟರು.
ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ ಆರಂಭಿಸದ ವಾಲ್ಮೀಕಿ ತೇರಿಗೆ ಸಮಾಜದ ನಾಯಕರು ಚಕ್ರಗಳಾಗಬೇಕು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.