ADVERTISEMENT

ಉಚಿತ ಕೋವಿಡ್‌ ಲಸಿಕೆಗೆ ಆಗ್ರಹ: ಕರವೇ ಪ್ರತಿಭಟನೆಗೆ ರಾಜ್ಯದಾದ್ಯಂತ ಬೆಂಬಲ 

​ಪ್ರಜಾವಾಣಿ ವಾರ್ತೆ
Published 10 ಜೂನ್ 2021, 12:20 IST
Last Updated 10 ಜೂನ್ 2021, 12:20 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಂಗಳೂರು: ರಾಜ್ಯದ ಜನರಿಗೆ ಉಚಿತವಾಗಿ, ಕಾಲಮಿತಿಯೊಳಗೆ, ತಾರತಮ್ಯವಿಲ್ಲದೆ, ಸುಲಭವಾಗಿ ನಿಲುಕುವಂತೆ ಕೋವಿಡ್ ಲಸಿಕೆಗಳನ್ನು ನೀಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಕರೆ ನೀಡಿದ್ದ ಪ್ರತಿಭಟನೆಗೆ ರಾಜ್ಯದಾದ್ಯಂತಬೆಂಬಲವ್ಯಕ್ತವಾಗಿದೆ.

ಗುರುವಾರ ಬೆಳಿಗ್ಗೆ 9.10 ಗಂಟೆಯಿಂದ ಆರಂಭಗೊಂಡ ಪ್ರತಿಭಟನೆ ಗ್ರಾಮೀಣ ಭಾಗದಲ್ಲಿ ಹೆಚ್ಚು ನಡೆದಿದೆ. ಈ ಪ್ರತಿಭಟನೆಯಲ್ಲಿ ಮಕ್ಕಳು, ವೃದ್ಧರೂ ಸೇರಿದಂತೆ ಎಲ್ಲ ವಯೋಮಾನದ ಜನರೂ ಭಾಗವಹಿಸಿದ್ದರು‌.

ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಪ್ರತಿಭಟನೆ ನಡೆದಿದ್ದು, ಎಲ್ಲ ಭಾಗಗಳಲ್ಲೂ ಅತ್ಯುತ್ಸಾಹದ ಪ್ರತಿಕ್ರಿಯೆ ಕಂಡುಬಂದಿದೆ. ಹಲವಾರು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ, ತಾಲ್ಲೂಕುಗಳಲ್ಲಿ ತಹಸೀಲ್ದಾರ್ ಕಚೇರಿಗಳ ಮುಂದೆ ಪ್ರತಿಭಟನೆಗಳು‌ ನಡೆದಿವೆ. ಇದಲ್ಲದೆ ಕರವೇ ಕಾರ್ಯಕರ್ತರು ಜಿಲ್ಲಾ, ತಾಲ್ಲೂಕು, ಗ್ರಾಮಪಂಚಾಯ್ತಿ ಕಚೇರಿಗಳು, ನಾಡಕಚೇರಿಗಳು, ವಿವಿಧ ಸರ್ಕಾರಿ ಕಚೇರಿಗಳ ಮುಂದೆಯೂ ಪ್ರತಿಭಟಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.