ADVERTISEMENT

ಟಿಪ್ಪು ಜಯಂತಿ ಕುರಿತ ಹೇಳಿಕೆ| ಹೆಗಡೆ, ರವಿ ವಿರುದ್ಧದ ದೂರು ಪರಿಗಣಿಸಲು ನಿರ್ದೇಶನ

ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹೈಕೋರ್ಟ್‌ನಿಂದ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2021, 3:31 IST
Last Updated 23 ಫೆಬ್ರುವರಿ 2021, 3:31 IST
ಅನಂತಕುಮಾರ್‌ ಹೆಗಡೆ, ಸಿ.ಟಿ ರವಿ
ಅನಂತಕುಮಾರ್‌ ಹೆಗಡೆ, ಸಿ.ಟಿ ರವಿ    

ಬೆಂಗಳೂರು: ಬಿಜೆ‍ಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮತ್ತು ಸಂಸದ ಅನಂತಕುಮಾರ ಹೆಗಡೆ ವಿರುದ್ಧದ ಖಾಸಗಿ ದೂರನ್ನು ಹೊಸದಾಗಿ ಪರಿಗಣಿಸುವಂತೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

2017ರಲ್ಲಿ ರಾಜ್ಯ ಸರ್ಕಾರ ಆಯೋಜಿಸಿದ್ದ ಟಿಪ್ಪು ಜಯಂತಿ ಸಂದರ್ಭದಲ್ಲಿ ನೀಡಿದ್ದ ಹೇಳಿಕೆಗಳಿಗೆ ಸಂಬಂಧಿಸಿದಂತೆ ಸಲ್ಲಿಸಿದ್ದ ಖಾಸಗಿ ದೂರನ್ನು ಬೆಂಗಳೂರಿನ 10ನೇ ಎಸಿಎಂಎಂ ನ್ಯಾಯಾಲಯ ವಜಾಗೊಳಿಸಿತ್ತು. ಆಗ ಕೇಂದ್ರ ಸಚಿವರಾಗಿದ್ದ ಅನಂತಕುಮಾರ ಹೆಗಡೆ ವಿರುದ್ಧ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆಯದೆ ದೂರು ದಾಖಲಿಸಲಾಗಿದೆ ಎಂದು ನ್ಯಾಯಾಲಯ ಹೇಳಿತ್ತು.

‘‍ತನಿಖೆ ಪೂರ್ಣಗೊಂಡ ನಂತರವೇ ಈ ಪ್ರಶ್ನೆ ಉದ್ಭವಿಸುತ್ತದೆ. ಸಿಆರ್‌ಪಿಸಿ 196 (1) ಮತ್ತು (1–ಎ) ಸೆಕ್ಷನ್‌ ಅನ್ನು ತಪ್ಪಾಗಿ ಅರ್ಥೈಸಿಕೊಂಡು ಈ ಆದೇಶವನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಅಂಗೀಕರಿಸಿದೆ’ ಎಂದು ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರಿದ್ದ ಪೀಠ ಅಭಿಪ್ರಾಯಪಟ್ಟಿದೆ.

ADVERTISEMENT

‘ಈ ವಿಷಯವನ್ನು ಸಂಬಂಧಿಸಿದ ನ್ಯಾಯಾಲಯಕ್ಕೆ ರವಾನಿಸಲಾಗಿದೆ. ಕಾನೂನಿನ ಪ್ರಕಾರ ಹೊಸ ದೂರನ್ನು ಪರಿಗಣಿಸುವಂತೆ’ ತಿಳಿಸಿದೆ.

‘ಸಿ.ಟಿ. ರವಿ ಮತ್ತು ಅನಂತಕುಮಾರ ಹೆಗಡೆ ಅವರ ಟ್ವೀಟ್‌ಗಳು ಧರ್ಮಗಳ ನಡುವೆ ದ್ವೇಷ ಹೆಚ್ಚಿಸುತ್ತವೆ’ ಎಂದು ಆರೋಪಿಸಿ ಉದ್ಯಮಿ ಆಲಂ ಪಾಷಾ ದೂರು ದಾಖಲಿಸಿದ್ದರು. ನ್ಯಾಯಾಲಯ 2017ರ ನವೆಂಬರ್ 4 ರಂದು ದೂರನ್ನು ವಜಾಗೊಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.