ADVERTISEMENT

ನೀರು ಪೂರೈಕೆ ಟ್ಯಾಂಕರ್‌ ಸರ್ಕಾರದ ಸುಪರ್ದಿಗೆ– ಡಿ.ಕೆ. ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2024, 23:30 IST
Last Updated 2 ಮಾರ್ಚ್ 2024, 23:30 IST
<div class="paragraphs"><p> ಡಿಕೆಶಿ</p></div>

ಡಿಕೆಶಿ

   

ಬೆಂಗಳೂರು: ‘ಬೆಂಗಳೂರಿನಲ್ಲಿ ಕುಡಿಯುವ ನೀರಿನ ಕೊರತೆ ನೀಗಿಸಲು ಕೊಳವೆ ಬಾವಿ ನೀರು ಪೂರೈಸುವ ಟ್ಯಾಂಕರ್‌ಗಳನ್ನು ಸರ್ಕಾರದ ಸುಪರ್ದಿಗೆ ತೆಗೆದುಕೊಳ್ಳಲಾಗುವುದು’ ಎಂದು ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಕುಡಿಯುವ ನೀರು ಮಾರಾಟದ ದಂಧೆ ತಡೆಯಲು ಕೊಳವೆಬಾವಿ ಹಾಗೂ ಅವುಗಳಿಂದ ನೀರು ಪೂರೈಕೆ ಮಾಡುವ ಟ್ಯಾಂಕರ್‌ಗಳು ಮಾರ್ಚ್‌ 7ರ ಒಳಗಾಗಿ ನೋಂದಣಿ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ’ ಎಂದರು.

ADVERTISEMENT

‘ಕೊಳವೆ ಬಾವಿಗಳ ಮೂಲಕ ಬೆಂಗಳೂರಿನ ಕುಡಿಯುವ ನೀರಿನ ಅಭಾವ ನೀಗಿಸಲಾಗುವುದು. ಈ ವಿಚಾರವಾಗಿ ಚರ್ಚಿಸಲು ಸೋಮವಾರ (ಮಾರ್ಚ್ 4) ಮಧ್ಯಾಹ್ನ 12 ಗಂಟೆಗೆ ಸಭೆ ಕರೆಯಲಾಗಿದೆ. ಬೆಂಗಳೂರಿನ ಎಲ್ಲಾ ಕ್ಷೇತ್ರಗಳಲ್ಲಿ ಕುಡಿಯುವ ನೀರಿನ ಪೂರೈಕೆಗೆ ತಲಾ ₹ 10 ಕೋಟಿ ಅನುದಾನ ನೀಡಲಾಗಿದೆ’ ಎಂದರು.

‘ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಅಭಾವ ಎದುರಾಗಿರುವ ಹಿನ್ನೆಲೆಯಲ್ಲಿ ಜಲ ಮಂಡಳಿ ಮತ್ತು ಬಿಬಿಎಂಪಿ ಅಧಿಕಾರಿಗಳು ನಿತ್ಯವೂ ಸಭೆ ನಡೆಸಿ, ಪರಿಹಾರ ಕ್ರಮ ಕುರಿತು ಚರ್ಚಿಸುತ್ತಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.