ADVERTISEMENT

ಹೊಟ್ಟೆ ನೋವು: ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು

​ಪ್ರಜಾವಾಣಿ ವಾರ್ತೆ
Published 21 ಮೇ 2020, 12:42 IST
Last Updated 21 ಮೇ 2020, 12:42 IST
ಹಾಸನದ ಮಣಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಾಲು ಮರದ ತಿಮ್ಮಕ್ಕ
ಹಾಸನದ ಮಣಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಾಲು ಮರದ ತಿಮ್ಮಕ್ಕ   

ಹಾಸನ: ಅನಾರೋಗ್ಯದಿಂದ ಬಳುತ್ತಿದ್ದ ಪರಿಸರ ಕಾರ್ಯಕರ್ತೆ ಸಾಲುಮರದ ತಿಮ್ಮಕ್ಕ ಅವರನ್ನು ನಗರದ ಮಣಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗೆದಾಖಲಿಸಲಾಗಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.

ತೀವ್ರ ಹೊಟ್ಟೆ ನೋವು, ವಾಂತಿ, ಭೇದಿಯಿಂದ ಅಸ್ವಸ್ಥಗೊಂಡಿದ್ದ ಅವರನ್ನು ಗುರುವಾರ ಸಂಜೆಆಸ್ಪತ್ರೆಗೆ ಸೇರಿಸಲಾಗಿದ್ದು, ಜೀವಕ್ಕೆ ಅಪಾಯ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಲಾಕ್‌ಡೌನ್‌ ನಿರ್ಬಂಧದಿಂದ ಅವರ ದತ್ತು ಪುತ್ರ ಬಳ್ಳೂರು ಉಮೇಶ್ ಅವರ ಸ್ವಗ್ರಾಮ ಬೇಲೂರಿನ ತಾಲ್ಲೂಕಿನ ಬಳ್ಳೂರು ಗ್ರಾಮದಲ್ಲಿ ಎರಡು ತಿಂಗಳಿಂದ ವಾಸವಾಗಿದ್ದರೆ.

ADVERTISEMENT

ಬಳ್ಳೂರು ಉಮೇಶ್ ಮಾತನಾಡಿ, ‘ಹೊಟ್ಟೆ ನೋವು, ವಾಂತಿ, ಭೇದಿಯಿಂದ ಅಸ್ವಸ್ಥಗೊಂಡಿದ್ದರು. ಈಗ ಚೇತರಿಸಿಕೊಂಡಿದ್ದಾರೆ. ಸ್ಕ್ಯಾನಿಂಗ್‌ ಬಳಿಕ ಆರೋಗ್ಯ ಸ್ಥಿತಿ ನೋಡಿ, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು ಎಂದು ವೈದ್ಯರು ಹೇಳಿದ್ದಾರೆ’ ಎಂದು ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.