ADVERTISEMENT

ಪುಣೆಗೆ ತೆರಳಿದ್ದ ರಾಜ್ಯದ ಬಸ್‌ ವಿರೂಪಗೊಳಿಸಿದ ಕಿಡಿಗೇಡಿಗಳು

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2021, 4:05 IST
Last Updated 20 ಡಿಸೆಂಬರ್ 2021, 4:05 IST
ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸನ್ನು ಕಿಡಿಗೇಡಿಗಳು ವಿರೂಪಗೊಳಿಸಿರುವುದು
ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸನ್ನು ಕಿಡಿಗೇಡಿಗಳು ವಿರೂಪಗೊಳಿಸಿರುವುದು   

ಲಿಂಗಸುಗೂರು: ರಾಯಚೂರು ಜಿಲ್ಲೆಯ ಲಿಂಗಸುಗೂರಿನಿಂದ ಮಹಾರಾಷ್ಟ್ರದ ಪುಣೆಗೆ ತೆರಳಿದ್ದ ಕಲ್ಯಾಣ ಕರ್ನಾಟಕ ಸಾರಿಗೆಯ ಬಸ್‌ ಮೇಲೆ ಕೆಲ ಕಿಡಿಗೇಡಿಗಳು ಮಸಿ ಬಳಿದು, ವಿರೂಪಗೊಳಿಸಿದ್ದಾರೆ. ಕೇಸರಿ ಬಣ್ಣದಲ್ಲಿ ಶಿವಸೇನೆ ಮತ್ತು ಶಿವಾಜಿ ಮಹಾರಾಜ ಎಂದು ಬರೆಯಲಾಗಿದೆ.

‘ಶನಿವಾರ ತಂಡೋಪತಂಡವಾಗಿ ಬಂದ ಯುವಕರು, ಕನ್ನಡಿಗರು ಮತ್ತು ಕರ್ನಾಟಕ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ನಂತರ ಕರ್ನಾಟಕದ ಬಸ್‍ಗಳ ಮೇಲೆ ಮನಸೋಇಚ್ಛೆ ಬರೆದು ವಿರೂಪಗೊಳಿಸಿದರು. ಅವರನ್ನು ತಡೆಯಲು ಸಾಧ್ಯವಾಗಲಿಲ್ಲ’ ಎಂದು ಬಸ್ ಚಾಲಕರಾದ ಕಾಶಿಂಸಾಬ ಮತ್ತು ಸಿದ್ದಪ್ಪ ತಿಳಿಸಿದರು.

ಆಳಂದ (ಕಲಬುರಗಿಜಿಲ್ಲೆ):ಮಹಾರಾಷ್ಟ್ರದ ಕೊಲ್ಹಾಪುರ, ಸಾಂಗ್ಲಿಯಲ್ಲಿ ಕನ್ನಡ ಧ್ವಜ ಹಾಗೂ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಅಪಮಾನಿಸಿದ ಕೃತ್ಯ ಖಂಡಿಸಿ ಆಳಂದ ಚೆಕ್ ಪೋಸ್ಟ್ ಬಳಿ ಜಯಕರ್ನಾಟಕ ಸಂಘಟನೆ ಕಾರ್ಯಕರ್ತರು ಶನಿವಾರ ರಾತ್ರಿ ಮಹಾರಾಷ್ಟ್ರದ ವಾಹನಗಳಿಗೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.