ADVERTISEMENT

ರಾಜಕೀಯ ಮಾತು ನಿಲ್ಲಿಸಿ ಕೆಲಸ ಮಾಡಿ: ಸ್ವಪಕ್ಷಿಯರ ಮೇಲೆ ಬಿಎಸ್‌ವೈ ಸಿಡಿಮಿಡಿ

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ನಡೆಯುತ್ತಿರುವ ಚರ್ಚೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಜೂನ್ 2021, 15:38 IST
Last Updated 7 ಜೂನ್ 2021, 15:38 IST
ಬಿಎಸ್ ಯಡಿಯೂರಪ್ಪ, ಪ್ರಜಾವಾಣಿ ಚಿತ್ರ
ಬಿಎಸ್ ಯಡಿಯೂರಪ್ಪ, ಪ್ರಜಾವಾಣಿ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ನಡೆಯುತ್ತಿರುವ ಚರ್ಚೆಯ ಬಗ್ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸ್ವಪಕ್ಷೀಯರ ಮೇಲೆಯೇ ಸಿಡಿಮಿಡಿಗೊಂಡಿದ್ದಾರೆ.

ಈ ಕುರಿತು ಸೋಮವಾರ ಟ್ವೀಟ್ ಮಾಡಿರುವ ಅವರು, ‘ಕೋವಿಡ್ ಸಾಂಕ್ರಾಮಿಕದಿಂದ ಜನ ಸಂಕಷ್ಟಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ, ಪ್ರತಿಯೊಬ್ಬ ಬಿಜೆಪಿ ಶಾಸಕರು ತಮ್ಮ ತಮ್ಮ ಕ್ಷೇತ್ರದಲ್ಲಿ ಕೋವಿಡ್ ನಿಯಂತ್ರಣ ಕಾರ್ಯಗಳಿಗೆ ಆದ್ಯತೆ ನೀಡಬೇಕು.ಯಾರೂ ಕೂಡ ಸಹಿ ಸಂಗ್ರಹಿಸುವುದಾಗಲಿ, ರಾಜಕೀಯ ಹೇಳಿಕೆಗಳನ್ನು ನೀಡುವುದಾಗಲಿ ಮಾಡದೆ, ಸಂಕಷ್ಟದಲ್ಲಿರುವ ಜನರಿಗೆ ನೆರವಾಗಬೇಕು ಎಂದು ವಿನಂತಿಸುತ್ತೇನೆ’ ಎಂದು ಎಚ್ಚರಿಕೆ ರೂಪದಲ್ಲಿ ಸಂದೇಶ ನೀಡಿದ್ದಾರೆ.

ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಅವರು ಇಂದುಮಾಧ್ಯಮಗಳೊಂದಿಗೆ ಮಾತನಾಡಿ, ಯಾರೂ ಏನೇ ಹೇಳಿದರೂ ನಾವು ಯಡಿಯೂರಪ್ಪ ಪರ ಇದ್ದೇವೆ. ಅವರೇ ನಮ್ಮ ನಾಯಕರು. ಈ ನಿಟ್ಟಿನಲ್ಲಿ ನಾನು ಬಿಜೆಪಿ ಶಾಸಕರ ಸಹಿ ಸಂಗ್ರಹ ಮಾಡುತ್ತಿದ್ದೇನೆ ಎಂದು ಹೇಳಿದ್ದರು.

ADVERTISEMENT

ರೇಣುಕಾಚಾರ್ಯ ಅವರ ಸಹಿ ಸಂಗ್ರಹ ಸುದ್ದಿಯ ಬಗ್ಗೆ ಅನೇಕ ಬಿಜೆಪಿ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಇದು ಹಾದಿ ಬೀದಿಯಲ್ಲಿ ಚರ್ಚಿಸುವ ಸಂಗತಿಯಲ್ಲಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ಈ ಹಿನ್ನೆಲೆಯಲ್ಲಿ ಸಿಎಂ ಅವರು ಇಂದು, ‘ಕೋವಿಡ್ ಸಂಕಷ್ಟಕ್ಕೆ ಜನಕ್ಕೆ ಸ್ಪಂದಿಸಿ ಕೆಲಸ ಮಾಡಿ, ಸಿಎಂ ಬದಲಾವಣೆ ಚರ್ಚೆ ನಿಲ್ಲಿಸಿ’ ಎಂದು ಸೂಚ್ಯವಾಗಿ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.