ADVERTISEMENT

ಸೈಬರ್ ಕ್ರೈಂ ತಡೆಗೆ ತಂತ್ರಜ್ಞರ ನೇಮಕ: ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 29 ಜುಲೈ 2020, 20:36 IST
Last Updated 29 ಜುಲೈ 2020, 20:36 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಬೆಂಗಳೂರು: 'ರಾಜ್ಯದಲ್ಲಿ ಸೆನ್‌ (ಸೈಬರ್, ಆರ್ಥಿಕ ಅಪರಾಧ ಹಾಗೂ ಮಾದಕ ವಸ್ತು) ಠಾಣೆಗಳಿಗೆ ಪರಿಣಿತ ತಂತ್ರಜ್ಞರನ್ನು ನೇಮಿಸಿಕೊಂಡು, ಸೈಬರ್ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಲಾಗುವುದು' ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,' ಬೆಂಗಳೂರಿನಲ್ಲಿ ಸೈಬರ್ ಅಪರಾಧ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿವೆ. ಶೀಘ್ರದಲ್ಲೇ ತಂತ್ರಜ್ಞರನ್ನು ನೇಮಿಸಿಕೊಳ್ಳುವ ಮೂಲಕ ಸೈಬರ್ ಅಪರಾಧ ಪ್ರಕರಣಗಳನ್ನು ಮಟ್ಟಹಾಕಲು ‘ಸೆನ್’‌ ಠಾಣೆಗಳನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳಲಾಗುವುದು' ಎಂದರು.

'ಅಮಾಯಕ ಜನರನ್ನು ಗುರಿಯಾಗಿಸಿಕೊಂಡಿರುವ ಸೈಬರ್ ಕಳ್ಳರು ಖಾತೆಗಳಿಗೆ ಕನ್ನ ಹಾಕುತ್ತಿದ್ದಾರೆ. ಡೆಬಿಟ್, ಕ್ರೆಡಿಟ್ ಕಾರ್ಡ್‍ಗಳನ್ನು ದುರ್ಬಳಕೆ ಜತೆಗೆ ಬ್ಯಾಂಕ್ ಸಂಬಂಧಿತ ಸೈಬರ್ ವಂಚನೆಗಳು ಹೆಚ್ಚಾಗಿವೆ. ಈ ನಿಟ್ಟಿನಲ್ಲಿ ಆಗಸ್ಟ್ ಮೊದಲ ವಾರದಲ್ಲಿ ಬ್ಯಾಂಕ್ ಮುಖ್ಯಸ್ಥರ ಜತೆ ಸಭೆ ನಡೆಸಲಾಗುವುದು' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT