ADVERTISEMENT

ಆಪರೇಷನ್‌ ಕಮಲದ ಬಗ್ಗೆಯೂ ಸಿಬಿಐ ತನಿಖೆಯಾಗಲಿ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2019, 8:35 IST
Last Updated 18 ಆಗಸ್ಟ್ 2019, 8:35 IST
   

ಬೆಂಗಳೂರು: ರಾಜ್ಯದಲ್ಲಿ ನಡೆದಿದೆ ಎನ್ನಲಾದ ಫೋನ್‌ ಕದ್ದಾಲಿಕೆ ಪ್ರಕರಣವನ್ನು ಸಿಎಂ ಯಡಿಯೂರಪ್ಪ ಅವರು ಸಿಬಿಐಗೆ ವಹಿಸುವುದಾಗಿನಿರ್ಧಾರ ಪ್ರಕಟಿಸುತ್ತಲೇಟ್ವೀಟ್‌ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಆಪರೇಷನ್‌ ಕಮಲವೂ ಸಿಬಿಐ ತನಿಖೆಗೆ ಒಳಪಡಲಿ,’ ಎಂದು ಆಗ್ರಹಿಸಿದ್ದಾರೆ.

‘ಪೋನ್ ಕದ್ದಾಲಿಕೆಯ ತನಿಖೆಯನ್ನು ನನ್ನ ಮನವಿ ಮೇರೆಗೆ ಸಿಬಿಐಗೆ ಒಪ್ಪಿಸಲಾಗಿದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಇತ್ತೀಚಿನ 'ಆಪರೇಷನ್ ಕಮಲ'ದಲ್ಲಿಯೂ ಕೋಟ್ಯಂತರ ರೂ.ಗಳ ದುರ್ವ್ಯವಹಾರ ನಡೆದಿದೆ ಎಂಬ ಆರೋಪ‌ ಇದೆ. ಅದರ ಬಗ್ಗೆಯೂ ಸಿಬಿಐನಿಂದ ತನಿಖೆ ನಡೆಸಬೇಕು,’ ಎಂದು ಅವರು ಆಗ್ರಹಿಸಿದ್ದಾರೆ.

‘ರಾಜ್ಯದಲ್ಲಿ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ನಮ್ಮ ಪಕ್ಷದ ಸತತ ಒತ್ತಾಯದ ಹೊರತಾಗಿಯೂ ಒಂದೇ ಒಂದು ಹಗರಣವನ್ನು ಸ್ವಯಂಪ್ರೇರಿತರಾಗಿ ಸಿಬಿಐ ತನಿಖೆಗೆ ಒಪ್ಪಿಸದೆ ಇದ್ದ ಬಿಜೆಪಿಗೆ ಈಗ ಇದ್ದಕ್ಕಿದ್ದಂತೆ ಕೇಂದ್ರ ತನಿಖಾ ಸಂಸ್ಥೆಯ ಮೇಲೆ ನಂಬಿಕೆ ಹುಟ್ಟಿರುವುದು ಆಶ್ಚರ್ಯಕರ ಬೆಳವಣಿಗೆ,‘ ಎಂದೂ ಅವರೂ ಟ್ವೀಟ್‌ನಲ್ಲಿ ವ್ಯಂಗ್ಯವಾಡಿದ್ದಾರೆ.

ADVERTISEMENT

ಕದ್ದಾಲಿಕೆ ಪ್ರಕರಣದಲ್ಲಿಬಯಲಾಗುವ ಅಕ್ರಮವೂ ತನಿಖೆಯಾಗಲಿ: ಎಚ್‌.ಕೆ ಪಾಟೀಲ್‌

ಫೋನ್ ಕದ್ದಾಲಿಕೆ ತನಿಖೆಯನ್ನು ಸರ್ಕಾರ ಸಿಬಿಐಗೆ ವಹಿಸಿದೆ. ತನಿಖೆಯನ್ನು ರಾಜ್ಯ ತನಿಖಾ ಸಂಸ್ಥೆಗಳೇ ಮಾಡಬಹುದಿತ್ತು. ಜೊತೆಗೆ ಕದ್ದಾಲಿಕೆಯಿಂದ ಬಹಿರಂಗಗೊಳ್ಳುವ ಗಂಭೀರ ಕ್ರಿಮಿನಲ್ ಪ್ರಕರಣಗಳು, ಲಂಚ ಕೊಡಕೊಳ್ಳುವ ವ್ಯವಹಾರಗಳು, ನೀತಿಗೆಟ್ಟ ಕ್ರಮಗಳು, ರಾಜ್ಯದ್ರೋಹದ ಕೆಲಸಗಳು ತನಿಖೆಗೆ ಒಳಪಡಬೇಕು. ಅಂಥ ಪ್ರಕರಣಗಳಲ್ಲಿ ಭಾಗಿಯಾದವರು ತನಿಖಾ ವ್ಯಾಪ್ತಿಗೆ ಬರಬೇಕು ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಎಚ್‌.ಕೆ ಪಾಟೀಲ್‌ ಅವರುಟ್ವೀಟ್‌ ಮೂಲಕ ಆಗ್ರಹಿಸಿದ್ದಾರೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.