ADVERTISEMENT

ಬೆಂಗಳೂರು ಮಹಾನಗರದಲ್ಲಿ ರಸ್ತೆ ಬದಿ ಆಹಾರ ಮಾರಾಟಕ್ಕೆ ನಿರ್ಬಂಧ: ಸಚಿವ ಶ್ರೀರಾಮುಲು

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2020, 4:24 IST
Last Updated 12 ಮಾರ್ಚ್ 2020, 4:24 IST
   

ಬೆಂಗಳೂರು: ಜಾಗತಿಕಮಟ್ಟದಲ್ಲಿ ಸಿಲಿಕಾನ್‌ ರಾಜಧಾನಿ ಎಂದೇ ಖ್ಯಾತಿಯಾಗಿರುವ ಬೆಂಗಳೂರು ಮಹಾನಗರದಲ್ಲಿಕಾಲರಾ, ಇತರೆ ಸಾಂಕ್ರಾಮಿಕ ರೋಗಗಳು ಹರಡದಂತೆ ತಡೆಯಲುರಸ್ತೆ ಬದಿ ಆಹಾರ ಪದಾರ್ಥ ಮಾರಾಟ ಮಾಡುವುದನ್ನು ನಿರ್ಬಂಧಿಸಿ, ತೆರವುಗೊಳಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಈಗಾಗಲೇಬೆಂಗಳೂರು ಮಹಾನಗರ ‌ಪಾಲಿಕೆಯು ರಸ್ತೆ ಬದಿ ಆಹಾರ ಪದಾರ್ಥ ಮಾರಾಟ ಮಾಡುವುದನ್ನು ನಿರ್ಬಂಧಿಸಿ, ತೆರವುಗೊಳಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ನೈರ್ಮಲ್ಯದ ಕೊರತೆ ಇರುವುದರಿಂದ ಸಾರ್ವಜನಿಕರು ರಸ್ತೆ ಬದಿ‌ಯಲ್ಲಿ ಮಾರಾಟ ಮಾಡುವ ಆಹಾರ ಪದಾರ್ಥಗಳನ್ನು ಸೇವನೆ ಮಾಡಬಾರದು ಎಂದು ಸಚಿವರು ಮನವಿ ಮಾಡುತ್ತೇನೆ.

ADVERTISEMENT

ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು ‘ಕಾಲರ ಮತ್ತು ಸಾಂಕ್ರಾಮಿಕ ಕಾಯಿಲೆಗಳು ಹರಡದಂತೆ ತಡೆಯಲು ಬೆಂಗಳೂರು ಮಹಾನಗರ ‌ಪಾಲಿಕೆಯು ರಸ್ತೆ ಬದಿ ಆಹಾರ ಪದಾರ್ಥ ಮಾರಾಟ ಮಾಡುವುದನ್ನು ನಿರ್ಬಂಧಿಸಿ, ತೆರವುಗೊಳಿಸುತ್ತಿದೆ.‌ನೈರ್ಮಲ್ಯದ ಕೊರತೆ ಇರುವುದರಿಂದ ಸಾರ್ವಜನಿಕರು ರಸ್ತೆ ಬದಿ‌ ಮಾರಲ್ಪಡುವ ಆಹಾರಗಳನ್ನು ಸೇವಿಸದಂತೆ ಈ ಮೂಲಕ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.