ADVERTISEMENT

ಹೆಣ್ಣು ಭ್ರೂಣ ಹತ್ಯೆ ತಡೆಗೆ ಕಠಿಣ ಕ್ರಮ: ಜಯಮಾಲಾ

ಸತತ ಪ್ರಯತ್ನದ ಬಳಿಕವೂ ಹೆಚ್ಚಳ ಕಾಣದ ಹೆಣ್ಣು ಮಕ್ಕಳ ಅನುಪಾತ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2019, 12:56 IST
Last Updated 13 ಫೆಬ್ರುವರಿ 2019, 12:56 IST
   

ಬೆಂಗಳೂರು: ರಾಜ್ಯದಲ್ಲಿ ಹೆಣ್ಣು ಮಕ್ಕಳ ಬದುಕಿನ ಸ್ಥಿತಿ ಸುಧಾರಣೆಗೆ ಹಾಗೂ ಹೆಣ್ಣು ಭ್ರೂಣ ಹತ್ಯೆ ತಡೆಗೆ ಕಠಿಣ ಕ್ರಮ ವಹಿಸಿದ ಹೊರತಾಗಿಯೂ ಗಂಡು ಹಾಗೂ ಹೆಣ್ಣು ಮಕ್ಕಳ ಅನುಪಾತದಲ್ಲಿ ಗಮನಾರ್ಹ ಬದಲಾವಣೆ ಆಗದ ಬಗ್ಗೆ ವಿಧಾನ ಪರಿಷತ್‌ನಲ್ಲಿ ಬುಧವಾರ ಬಿಜೆಪಿಯ ತೇಜಸ್ವಿನಿ ಗೌಡ ಕಳವಳ ವ್ಯಕ್ತಪಡಿಸಿದರು.

ಇದಕ್ಕೆ ಉತ್ತರಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಜಯಮಾಲಾ, ‘2002ರಿಂದ ಈಚೆಗೆ ಹೆಣ್ಣು ಭ್ರೂಣಲಿಂಗ ಪತ್ತೆಗೆ ಸಹಕರಿಸಿದ 80 ಪ್ರಕರಣಗಳ ಸಂಬಂಧ ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದೆ. 39 ಪ್ರಕರಣಗಳ ವಿಚಾರಣೆಗೆ ಬಾಕಿ ಇವೆ. 41 ವೈದ್ಯರಿಗೆ ದಂಡ ವಿಧಿಸಲಾಗಿದೆ. ಆದರೆ, ಇದುವರೆಗೆ ಯಾರಿಗೂ ಜೈಲು ಶಿಕ್ಷೆ ಆಗಿಲ್ಲ’ ಎಂದರು.

‘ಹೆಣ್ಣು ಭ್ರೂಣ ಹತ್ಯೆ ತಡೆಯಲು ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳುತ್ತೇವೆ. ಭ್ರೂಣದ ಲಿಂಗ ಪತ್ತೆಗೆ ಸಹಕರಿಸುವ ಆಸ್ಪತ್ರೆಗಳ ವೈದ್ಯರು ಹಾಗೂ ಸ್ಕ್ಯಾನಿಂಗ್ ಸೆಂಟರ್‌ಗಳ ಮೇಲೆ ನಿಗಾ ಇಡಲು ಹಾಗೂ ಇಂತಹ ಅಕ್ರಮ ಚಟುವಟಿಕೆಯಲ್ಲಿ ತೊಡಗಿಸಿಕೊಂಡ ಪ್ರಕರಣಗಳ ತನಿಖೆಯನ್ನು ಸಮರ್ಪಕವಾಗಿ ನಡೆಸಲು ಆರೋಗ್ಯ ಇಲಾಖೆ ಜೊತೆ ಚರ್ಚಿಸುತ್ತೇನೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.