ಸಾಂದರ್ಭಿಕ ಚಿತ್ರ
ಬೆಂಗಳೂರು: ಹೆಚ್ಚುವರಿ ಶುಲ್ಕ ವಸೂಲಿ ಮಾಡುವ ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕಾಲೇಜುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಉನ್ನತ ಶಿಕ್ಷಣ ಇಲಾಖೆ ಮುಂದಾಗಿದೆ.
ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅಧ್ಯಕ್ಷತೆಯಲ್ಲಿ ಈಚೆಗೆ ನಡೆದ ಉನ್ನತ ಶಿಕ್ಷಣ ಇಲಾಖೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಅಧಿಕಾರಿಗಳು ಮತ್ತು ಶುಲ್ಕ ನಿಯಂತ್ರಣ ಸಮಿತಿಯ ಅಧ್ಯಕ್ಷರು ಭಾಗವಹಿಸಿದ್ದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಹಲವು ಕಾಲೇಜುಗಳು ನಿಗದಿಗಿಂತ ಹೆಚ್ಚುವರಿ ಶುಲ್ಕ ಪಡೆಯುತ್ತಿರುವ ಕುರಿತು ಸಾಕಷ್ಟು ದೂರುಗಳು ದಾಖಲಾಗುತ್ತಿವೆ. ಆದರೂ, ಹೆಚ್ಚಿನ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಮಾಹಿತಿ ಇಲ್ಲ. ಅದಕ್ಕಾಗಿ ಕಾಲೇಜುಗಳು ನೀಡುವ ಪ್ರಕಟಣೆ ಹಾಗೂ ಶುಲ್ಕ ರಸೀದಿಯಲ್ಲೇ ಶುಲ್ಕ ನಿಯಂತ್ರಣ ಮತ್ತು ಪ್ರವೇಶ ಮೇಲ್ವಿಚಾರಣಾ ಸಮಿತಿಗಳ ಬಗ್ಗೆ ವಿವರ, ಸಹಾಯವಾಣಿ ನಮೂದಿಸುವುದನ್ನು ಕಡ್ಡಾಯಗೊಳಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.
2024-25 ಶೈಕ್ಷಣಿಕ ಸಾಲಿನಲ್ಲಿ ಹೆಚ್ಚುವರಿ ಶುಲ್ಕ ಪಡೆದ 174 ದೂರುಗಳು ಬಂದಿದ್ದವು. ಎಂಜನಿಯರಿಂಗ್, ನರ್ಸಿಂಗ್, ಎಂಬಿಎ, ಎಂಸಿಎ ಕೋರ್ಸ್‌ಗಳಲ್ಲಿ ಇಂತಹ ಪ್ರಕರಣಗಳು ಅಧಿಕವಾಗಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.