ADVERTISEMENT

ಸರ್ಕಾರಿ ಭೂಮಿ, ಅರಣ್ಯ, ರಸ್ತೆ ಬದಿಯ ಮರ ಕತ್ತರಿಸಿದರೆ ಕಠಿಣ ಕ್ರಮ: ಈಶ್ವರ ಖಂಡ್ರೆ

​ಪ್ರಜಾವಾಣಿ ವಾರ್ತೆ
Published 8 ಮೇ 2025, 15:23 IST
Last Updated 8 ಮೇ 2025, 15:23 IST
<div class="paragraphs"><p>ಈಶ್ವರ ಖಂಡ್ರೆ</p></div>

ಈಶ್ವರ ಖಂಡ್ರೆ

   

ಫೇಸ್‌ಬುಕ್ ಚಿತ್ರ

ಬೆಂಗಳೂರು: ಸರ್ಕಾರಿ ಭೂಮಿ, ಅರಣ್ಯ, ರಸ್ತೆ ಬದಿಯ ಮರಗಳನ್ನು ಅಕ್ರಮವಾಗಿ ಕಡಿಯುವವರ ವಿರುದ್ಧ ಕಠಿಣ ಕ್ರಮ ಜರುಗಿಸಲು, ಹೆಚ್ಚಿನ ದಂಡ ವಿಧಿಸಲು ವೃಕ್ಷ ಸಂರಕ್ಷಣಾ ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.

ADVERTISEMENT

ಅರಣ್ಯ ಭವನದಲ್ಲಿ ಗುರುವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿಯ ನೆಪದಲ್ಲಿ ಮರಗಳನ್ನು ಕಡಿಯಲು ಅನುಮತಿ ನೀಡಲಾಗುತ್ತಿದೆ. ಸಕಾರಣವಿಲ್ಲದೆ ಮರಗಳನ್ನು ಕಡಿಯುವುದಕ್ಕೆ ಸುಪ್ರೀಂ ಕೋರ್ಟ್‌ ಸಹ ಆಕ್ಷೇಪ ವ್ಯಕ್ತಪಡಿಸಿದೆ. ಜಾಗತಿಕ ತಾಪಮಾನ ಏರಿಕೆ, ಹವಾಮಾನ ಬದಲಾವಣೆಯ ಸನ್ನಿವೇಶದಲ್ಲಿ ವೃಕ್ಷ ಸಂರಕ್ಷಣೆಗೆ ಕಠಿಣ ಕಾನೂನಿನ ಅಗತ್ಯವಿದೆ ಎಂದರು.

2015ರ ನಂತರದ ಒತ್ತುವರಿ ತೆರವು:

2015ರ ಪೂರ್ವದ ಪಟ್ಟಾ ಜಮೀನು, ಒತ್ತುವರಿ ಸೇರಿ 3 ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಜನರಿಗೆ ಪುನರ್ವಸತಿ ಕಲ್ಪಿಸುವವರೆಗೆ ತೊಂದರೆ ನೀಡಬಾರದು. 2015ರ ನಂತರ ಮಾಡಿದ ಒತ್ತುವರಿ, ದೊಡ್ಡ ಒತ್ತುವರಿಗಳನ್ನು ನಿರ್ದಾಕ್ಷಿಣ್ಯವಾಗಿ ತೆರವು ಮಾಡಬೇಕು. ಅರಣ್ಯ ಇಂಡೀಕರಣ ಕೋರಿ ಉಪ ವಿಭಾಗಾಧಿಕಾರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಿದರು.

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮೀನಾಕ್ಷಿ ನೇಗಿ, ಪಿಸಿಸಿಎಫ್‌ (ವನ್ಯಜೀವಿ) ಸುಭಾಷ್‌ ಮಾಲ್ಕಡೆ  ಉಪಸ್ಥಿತರಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.