ADVERTISEMENT

ಗಡಿಯಲ್ಲಿ ಕೋವಿಡ್ ಹರಡದಂತೆ ಕಟ್ಟೆಚ್ಚರ ವಹಿಸಲು ಸೂಚನೆ: ಸಿಎಂ ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 2 ಜನವರಿ 2022, 19:20 IST
Last Updated 2 ಜನವರಿ 2022, 19:20 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಬೆಳಗಾವಿ: ‘ಕೊರೊನಾ ಸೋಂಕು ಹರಡುವುದನ್ನು ನಿಯಂತ್ರಿಸಲು ಎಲ್ಲ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ. ಗಡಿಯಲ್ಲಿ ಹೆಚ್ಚಿನ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೊರೊನಾ, ಓಮೈಕ್ರಾನ್ ಪ್ರಕರಣಗಳುವಾರದಿಂದ ಹೆಚ್ಚಿವೆ. ಮಹಾರಾಷ್ಟ್ರದಲ್ಲಿ ಗಣನೀಯವಾಗಿ ಏರಿಕೆಯಾಗಿವೆ. ಬೆಳಗಾವಿ ಹಾಗೂ ಅಕ್ಕಪಕ್ಕದ ಜಿಲ್ಲೆಗಳ ಚೆಕ್‌ಪೋಸ್ಟ್‌ಗಳನ್ನೂ ಬಿಗಿಗೊಳಿಸಲಾಗುತ್ತಿದೆ. ಜನರ ಆರೋಗ್ಯ ದೃಷ್ಟಿಯಿಂದ ಈ ಕ್ರಮ ಅನಿವಾರ್ಯ’ ಎಂದು ಹೇಳಿದರು.

‘ಪರಿಸ್ಥಿತಿ ನಿಭಾಯಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಆಕ್ಸಿಜನ್ ಕೊರತೆ ನೀಗಿಸಲು, ಹೆಚ್ಚುವರಿ ಐಸಿಯು ಹಾಗೂ ಬೆಡ್ ವ್ಯವಸ್ಥೆಗೆ ಕ್ರಮಕೈಗೊಳ್ಳಲಾಗಿದೆ. ಔಷಧವನ್ನೂ ಸಿದ್ಧವಾಗಿಟ್ಟುಕೊಳ್ಳುವಂತೆ ಸೂಚಿಸಲಾಗಿದೆ’ ಎಂದು ತಿಳಿಸಿದರು.

ADVERTISEMENT

ನೈಟ್ ಕರ್ಫ್ಯೂ ವಿಸ್ತರಣೆ ಹಾಗೂ ಮುಂಬೈ ಮಾದರಿಯಲ್ಲಿ ಬೆಂಗಳೂರಿನಲ್ಲೂ ಟಫ್ ರೂಲ್ಸ್ ಜಾರಿ ಸಂಬಂಧ ಎರಡು ದಿನಗಳಲ್ಲಿ ನಿರ್ಧರಿಸಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.