ADVERTISEMENT

‘ವಿಧಾನಸಭೆಯಲ್ಲಿ ಒಡೆಯರ್‌ ಭಾವಚಿತ್ರ ಅಳವಡಿಸಿ’

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2021, 19:30 IST
Last Updated 3 ಫೆಬ್ರುವರಿ 2021, 19:30 IST
ಎಸ್.ಟಿ. ಸೋಮಶೇಖರ್
ಎಸ್.ಟಿ. ಸೋಮಶೇಖರ್   

ಬೆಂಗಳೂರು: ವಿಧಾನಸಭೆಯಲ್ಲಿ ಹತ್ತನೇ ಚಾಮರಾಜ ಒಡೆಯರ್ ಮತ್ತು ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಭಾವಚಿತ್ರ ಅಳವಡಿಸಬೇಕು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್‌ ಅವರು ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಪತ್ರ ಬರೆದಿದ್ದಾರೆ.

‘ರಾಜಪರಂಪರೆಯ ಕಾಲದಲ್ಲಿಯೇ ಪ್ರಜಾಪ್ರಭುತ್ವದ ಪರಿಕಲ್ಪನೆ ಹೊಂದಿ ಅದನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿದ್ದವರು ಚಾಮರಾಜ ಒಡೆಯರ್ ಮತ್ತು ನಾಲ್ವಡಿ ಕೃಷ್ಣರಾಜ ಒಡೆಯರ್. ರಾಜ್ಯಕ್ಕೆ ಉತ್ತಮ ಹೆಸರು ತಂದು ಕೊಡುವಲ್ಲಿ ಅಂದಿನ ಮೈಸೂರು ಮಹಾಸಂಸ್ಥಾನದ ಮಹಾರಾಜರುಗಳ ಕೊಡುಗೆಗಳೂ ಸಾಕಷ್ಟಿವೆ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

‘ಭಾರತದಲ್ಲಿ ಪ್ರಜಾಪ್ರತಿನಿಧಿ ಸಭೆಯ ಪರಿಕಲ್ಪನೆಯನ್ನು ಹುಟ್ಟುಹಾಕಿದ್ದು ಚಾಮರಾಜ ಒಡೆಯರ್ ಅವರು. 1881ರಲ್ಲಿ ಈ ವ್ಯವಸ್ಥೆಯನ್ನು ಜಾರಿಗೆ ತಂದರು. ಆದರೆ, ಇದಕ್ಕೆ ಶಾಸನಬದ್ಧ ಮಾನ್ಯತೆ ನೀಡಿ ಇಂತಹ ಒಂದು ಪರಿಕಲ್ಪನೆಯನ್ನು ಸಾಕಾರಗೊಳಿಸಿದ್ದು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು. 1923ರಲ್ಲಿ ಹೊಸ ಪ್ರಜಾಪ್ರತಿನಿಧಿ ಸಭೆಯನ್ನು ಸ್ಥಾಪಿಸಿ ಜಾತಿ, ವರ್ಗಗಳನ್ನು ನೋಡದೆ ಎಲ್ಲರಿಗೂ ಸಮಾನ ಅವಕಾಶವನ್ನು ಕಲ್ಪಿಸಿ ಆದರ್ಶ ಪ್ರಜಾಪ್ರಭುತ್ವದ ಮಾದರಿಯನ್ನು ಅವರು ಹಾಕಿಕೊಟ್ಟರು’ ಎಂದು ಅವರು ಸ್ಮರಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.