ADVERTISEMENT

ಕೇಂದ್ರ ಮಸೂದೆಗಳ ಅಧ್ಯಯನ: ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2023, 16:04 IST
Last Updated 17 ಅಕ್ಟೋಬರ್ 2023, 16:04 IST
<div class="paragraphs"><p>ಎಚ್‌.ಕೆ. ಪಾಟೀಲ</p></div>

ಎಚ್‌.ಕೆ. ಪಾಟೀಲ

   

ಬೆಂಗಳೂರು: ಲೋಕಸಭೆಯಲ್ಲಿ ಈಚೆಗೆ ಮಂಡಿಸಿದ್ದ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಹಾಗೂ ಭಾರತೀಯ ಸಾಕ್ಷ್ಯ ಮಸೂದೆಗಳ ಕುರಿತು ಅಧ್ಯಯನ ನಡೆಸಲು ರಚಿಸಿದ್ದ ಸಮಿತಿ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸಿತು. 

ವರದಿ ಸ್ವೀಕರಿಸಿದ ನಂತರ ಮಾತನಾಡಿದ ಸಿದ್ದರಾಮಯ್ಯ, ‘ಕಾನೂನು ಸಚಿವ ಎಚ್‌.ಕೆ.ಪಾಟೀಲ ಅಧ್ಯಕ್ಷತೆಯ ಸಮಿತಿ ವರದಿ ಸಲ್ಲಿಸಿದೆ. ಸಮಿತಿಯ ಪರಿಣತ ಸದಸ್ಯರು ತಮ್ಮ ಪರಿಶ್ರಮ, ಜ್ಞಾನ ಹಾಗೂ ಅನುಭವದ ಆಧಾರದಲ್ಲಿ ವರದಿ ಸಿದ್ಧಪಡಿಸಿದ್ದಾರೆ. ವರದಿ ಪರಿಶೀಲಿಸಿ, ಸರ್ಕಾರ ತನ್ನ ಅಭಿಪ್ರಾಯವನ್ನು ಕೇಂದ್ರ ಗೃಹ ಸಚಿವರಿಗೆ ತಿಳಿಸಲಿದೆ. ಮಸೂದೆಗಳ ಕುರಿತು ಚರ್ಚಿಸಲಿದೆ’ ಎಂದು ಹೇಳಿದರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.