ADVERTISEMENT

ಉಪವಿಭಾಗಾಧಿಕಾರಿಗಳಿಗೆ ಸಮನ್ವಯ ಹೊಣೆ

​ಪ್ರಜಾವಾಣಿ ವಾರ್ತೆ
Published 20 ಜನವರಿ 2019, 18:45 IST
Last Updated 20 ಜನವರಿ 2019, 18:45 IST

ಬೆಂಗಳೂರು: ತಾಲ್ಲೂಕು ಮಟ್ಟದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಜತೆಗೆ ಸಮನ್ವಯ ಸಾಧಿಸುವ ಹೊಣೆಯನ್ನು ಉಪವಿಭಾಗಾಧಿಕಾರಿಗಳಿಗೆ ಸಿಬ್ಬಂದಿ ಹಾಗೂ ಸುಧಾರಣಾ ಇಲಾಖೆ ವಹಿಸಿದೆ.

ವಿವಿಧ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನ ಸಂದರ್ಭದಲ್ಲಿ ಉದ್ಬವಿಸಬಹುದಾದ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ತಹಶೀಲ್ದಾರ್‌, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ, ನಗರಸಭೆ ಹಾಗೂ ಪುರಸಭೆಗಳ ಆಯುಕ್ತರು/ ಮುಖ್ಯಾಧಿಕಾರಿಗಳ ಜತೆಗೆ ಕನಿಷ್ಠ ತಿಂಗಳಿಗೊಮ್ಮೆ ಸಮನ್ವಯ ಸಭೆ ನಡೆಸಬೇಕು.

ನಗರ ಹಾಗೂ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಬೇಕು. ಯೋಜನೆಗಳಿಗೆ ವೇಗ ನೀಡಲು ಹಾಗೂ ಗುಣಮಟ್ಟ ಕಾಪಾಡಲು ತಪಾಸಣೆ ನಡೆಸಬೇಕು ಮತ್ತು ಮೇಲುಸ್ತುವಾರಿ ವಹಿಸಬೇಕು ಎಂದು ಸೂಚಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.