ಬೆಂಗಳೂರು: ಸರದಿಯಂತೆ 2ನೇ ಮತ್ತು 4ನೇ ಶನಿವಾರ ಹಾಗೂ ಭಾನುವಾರದ ರಜಾ ದಿನಗಳಂದು ಕಾರ್ಯನಿರ್ವಹಿಸುವ ಉಪ ನೋಂದಣಾಧಿಕಾರಿ ಕಚೇರಿಗಳಿಗೆ ಮಂಗಳವಾರ ರಜಾ ದಿನವಾಗಿರುತ್ತದೆ.
ರಾಜ್ಯದ ಪ್ರತಿಯೊಂದು ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಯಲ್ಲಿನ ಉಪ ನೋಂದಣಾಧಿಕಾರಿ ಕಚೇರಿಗಳು ಸರದಿಯಂತೆ 2ನೇ ಮತ್ತು 4ನೇ ಶನಿವಾರ ಹಾಗೂ ಭಾನುವಾರದ ರಜಾ ದಿನಗಳಂದು ಕಾರ್ಯನಿರ್ವಹಿಸಬೇಕು. ಯಾವ ಕಚೇರಿ ಆಯಾ ವಾರದ ರಜಾ ದಿನದಂದು ತೆರೆದಿರುತ್ತದೆಯೋ ಆ ಕಚೇರಿಗೆ ಮುಂದಿನ ಮಂಗಳವಾರ ರಜೆ ಇರುತ್ತದೆ ಎಂದು ಕಂದಾಯ ಇಲಾಖೆ ಹೊರಡಿಸಿದ ಆದೇಶದಲ್ಲಿ ವಿವರಿಸಲಾಗಿದೆ.
ಪ್ರತಿ ಜಿಲ್ಲಾ ನೋಂದಣಿ ಕಚೇರಿಯ ವ್ಯಾಪ್ತಿಯಲ್ಲಿನ ಸ್ವತ್ತುಗಳನ್ನು ಆ ವ್ಯಾಪ್ತಿಯ ಯಾವುದೇ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ನೋಂದಣಿ ಮಾಡಿಸಬಹುದು ಎಂಬ ನಿಯಮ ಜಾರಿಗೊಂಡ ಬಳಿಕ ಸರದಿಯಂತೆ ಒಂದು ಉಪ ನೋಂದಣಾಧಿಕಾರಿ ಕಚೇರಿ ರಜಾ ದಿನಗಳಲ್ಲೂ ಕಾರ್ಯನಿರ್ವಹಿಸುತ್ತವೆ. ಇದರಿಂದ ವರ್ಷದ 365 ದಿನವೂ ನೋಂದಣಿಗೆ ಅವಕಾಶ ಸಿಕ್ಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.