ADVERTISEMENT

ಕಬ್ಬು ದರ ಟನ್‌ಗೆ ₹50 ಹೆಚ್ಚುವರಿ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2022, 21:24 IST
Last Updated 7 ಡಿಸೆಂಬರ್ 2022, 21:24 IST
   

ಬೆಂಗಳೂರು: 2022–23 ನೇ ಸಕ್ಕರೆ ಹಂಗಾಮಿನಲ್ಲಿಕಬ್ಬು ಸರಬರಾಜು ಮಾಡಿದ ರೈತರಿಗೆ ಕೇಂದ್ರ ಸರ್ಕಾರ ನಿಗದಿ ಮಾಡಿರುವ ದರದ ಜೊತೆಗೆ ಪ್ರತಿ ಟನ್‌ಗೆ ₹50 ಹೆಚ್ಚುವರಿಯಾಗಿ ನೀಡುವ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಅಲ್ಲದೆ, 2022–23 ನೇ ಸಾಲಿನಲ್ಲಿ ಕಬ್ಬು ನುರಿಸುವ ಹಂಗಾಮು ಮುಗಿದ ನಂತರ ವಾಸ್ತವಿಕವಾಗಿ ಸಕ್ಕರೆ, ಎಥೆ ನಾಲ್‌ ಮತ್ತು ಇತರೆ ಉಪ ಉತ್ಪನ್ನಗಳ ಮಾರಾಟದಿಂದ ಬರುವ ಅಂತಿಮ ಆದಾಯವನ್ನು ಹಂಚಿಕೆ ಸೂತ್ರದ ಪ್ರಕಾರ ಅಂತಿಮ ಕಬ್ಬಿನ ದರವನ್ನು ನಿರ್ಧರಿಸಲಾಗುವುದು ಎಂದು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶಕ ಶಿವಾನಂದ ಎಚ್‌. ಕಲಕೇರಿ ಆದೇಶದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT