ADVERTISEMENT

ಸಕ್ಕರೆ ಕಾರ್ಖಾನೆ ಮಾಲೀಕರ ಜತೆ ಇಂದು ಸಿ.ಎಂ ಸಭೆ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2018, 20:30 IST
Last Updated 21 ನವೆಂಬರ್ 2018, 20:30 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಇತ್ಯರ್ಥ ಪಡಿಸಲು ಮುಂದಾಗಿರುವ ಮುಖ್ಯಮಂತ್ರಿ ಎಚ್‌.ಡಿ. ಕುಮಾರ
ಸ್ವಾಮಿ, ಬಾಕಿ ಪಾವತಿ ಸಂಬಂಧ ಸಕ್ಕರೆ ಕಾರ್ಖಾನೆ ಮಾಲೀಕರ ಜತೆಗೆ ಗುರುವಾರ ಮಧ್ಯಾಹ್ನ 12.30ಕ್ಕೆ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಸಭೆ ನಡೆಸಲಿದ್ದಾರೆ.

ಕಬ್ಬು ಬಾಕಿ ಪಾವತಿ ಮತ್ತು ವೈಜ್ಞಾನಿಕ ದರ ನಿಗದಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ರೈತ ಪ್ರತಿನಿಧಿಗಳು ಹಾಗೂ ಸಕ್ಕರೆ ಕಾರ್ಖಾನೆಗಳ ಪ್ರತಿನಿಧಿಗಳ ಜತೆಗೆ ವಿಧಾನಸೌಧದಲ್ಲಿ ಮಂಗಳವಾರ ಆರೂವರೆ ತಾಸು ಸಭೆ ನಡೆಸಿದ್ದರು. ಮಾಲೀಕರ ಜತೆ ಚರ್ಚಿಸುವುದಾಗಿ ಸಭೆಯಲ್ಲಿ ಪಾಲ್ಗೊಂಡಿದ್ದ ಕಾರ್ಖಾನೆ ಪ್ರತಿನಿಧಿಗಳು ತಿಳಿಸಿದ್ದರು.

ಸರ್ಕಾರಿ ದಾಖಲೆಗಳ ಪ್ರಕಾರ ರೈತರಿಗೆ ₹35.67 ಕೋಟಿ ಬಾಕಿ ಉಳಿಸಿಕೊಂಡಿವೆ. ಕಾರ್ಖಾನೆಗಳು ₹450 ಕೋಟಿಗೂ ಅಧಿಕ ಪಾವತಿ ಮಾಡಬೇಕಿದೆ ಎಂಬುದು ರೈತರ ವಾದ.

ADVERTISEMENT

ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲು ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ, ಸರಣಿ ಹೋರಾಟ ಹಾಗೂ ಬೆಳಗಾವಿಯಲ್ಲಿ ಡಿ.10ರಂದು ಬೃಹತ್ ಸಮಾವೇಶ ನಡೆಸಲು ಬಿಜೆಪಿ ಸಿದ್ಧತೆ ನಡೆಸಿದೆ. ಅಧಿವೇಶನಕ್ಕೆ ಮುನ್ನವೇ ಸಮಸ್ಯೆಗೆ ಪರಿಹಾರ ಹುಡುಕುವ ಸವಾಲು ಮುಖ್ಯಮಂತ್ರಿ ಅವರ ಎದುರು ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.