ADVERTISEMENT

ಮುಖ್ಯಮಂತ್ರಿ ನೇತೃತ್ವದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2018, 9:33 IST
Last Updated 22 ನವೆಂಬರ್ 2018, 9:33 IST
   

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯಲಿರುವ ಸಭೆಗೆ ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಯ ಸಕ್ಕರೆ ಕಾರ್ಖಾನೆ ಮಾಲೀಕರು ಬಂದಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ಆಯೋಜಿಸಲಾಗಿದೆ.

ಸಕ್ಕರೆ ಕಾರ್ಖಾನೆ ಮಾಲೀಕರಾದ ಮುರುಗೇಶ ನಿರಾಣಿ, ಎಸ್.ಆರ್. ಪಾಟೀಲ, ರಮೇಶ ಜಾರಕಿಹೊಳಿ, ಸತೀಶ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಆನಂದ್ ನ್ಯಾಮಗೌಡ, ಶ್ರೀಮಂತ್ ಪಾಟೀಲ, ಉಮೇಶ್ ಕತ್ತಿ, ಶಶಿಕಲಾ ಜೊಲ್ಲೆ, ಶಿವಾನಂದ ಪಾಟೀಲ ಸೇರಿದಂತೆ ಹಲವರು ಬಂದಿದ್ದಾರೆ.

ADVERTISEMENT

ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ:

ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ಆರಂಭವಾಗಿದೆ.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ, ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ಮಾಜಿ ಸಚಿವರಾದ ಎಸ್.ಆರ್. ಪಾಟೀಲ, ಸತೀಶ ಜಾರಕಿಹೊಳಿ, ಮುರುಗೇಶ ನಿರಾಣಿ, ಉಮೇಶ್ ಕತ್ತಿ, ಬಾಲಚಂದ್ರ ಜಾರಕಿಹೊಳಿ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.