ಮಂಡ್ಯ: ‘ಸ್ವತಂತ್ರ ಸರ್ಕಾರ ಇಲ್ಲದ ವೇಳೆಯೂ ರೈತರ ಉಳಿವಿಗಾಗಿ ಶ್ರಮವಹಿಸಿದ್ದೆ. 136 ಸೀಟಿನ ಸ್ವತಂತ್ರ ಸರ್ಕಾರ, ಇವರಿಗೇನಾಗಿದೆ ದರಿದ್ರ? ರೈತರನ್ನು 7 ದಿನದಿಂದ ರಸ್ತೆಯಲ್ಲಿ ಮಲಗಿಸಬೇಕಿತ್ತಾ? ರೈತರ ಬಗ್ಗೆ ಕಾಳಜಿ ಇದ್ದಿದ್ದರೆ ಸರ್ಕಾರ ಈ ರೀತಿ ಮಾಡುತ್ತಿರಲಿಲ್ಲ’ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕುಟುಕಿದರು.
ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿ, ‘ನಿನ್ನೆಯ ದಿನ ಶಾಸಕ ಮೇಟಿ ಅವರ ಅಂತಿಮ ದರ್ಶನಕ್ಕೆ ಹೋಗಿದ್ದ ಮುಖ್ಯಮಂತ್ರಿಯವರು ಅಲ್ಲೇ ಪಕ್ಕದಲ್ಲೇ ನಡೆಯುತ್ತಿದ್ದ ಪ್ರತಿಭಟನೆ ಜಾಗಕ್ಕೆ ಹೋಗಬಹುದಿತ್ತಲ್ವಾ? ಅಹಿಂದಾ ಹೆಸರಲ್ಲಿ ದೊಡ್ಡ ರ್‍ಯಾಲಿ ಮಾಡುವೆ ಎನ್ನುತ್ತಾರೆ. ಅದೆಲ್ಲಾ ಯಾವ ಪುರುಷಾರ್ಥಕ್ಕೆ?’ ಎಂದು ಅವರು ಪ್ರಶ್ನಿಸಿದರು.
‘ರೈತರು ಬೆಲೆ ನಿಗದಿ ಕೇಳಿದರೆ ನಮ್ಮದಲ್ಲ ಕೇಂದ್ರ ಸರ್ಕಾರ ಹಣ ಕೊಡಬೇಕು ಎನ್ನುತ್ತಾರೆ. ಸಾಲ ಮನ್ನಾ ಮಾಡುವಾಗ ನಾನೇನು ಕೇಂದ್ರ ಸರ್ಕಾರದ ಬಳಿಗೆ ಹೋಗಿದ್ನಾ? ಸರ್ಕಾರದ ನಿರ್ಧಾರ ನೋಡಿ ಮುಂದಿನ ತೀರ್ಮಾನ ಮಾಡುತ್ತೇವೆ. ರೈತರ ಬದುಕಿನ ಜತೆ ಕಾಂಗ್ರೆಸ್ ಸರ್ಕಾರ ಚೆಲ್ಲಾಟ ಆಡುತ್ತಿದೆ’ ಎಂದು ಆರೋಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.