ADVERTISEMENT

ಕೇಂದ್ರದತ್ತ ಬೆರಳು ತೋರಿಸುವುದನ್ನು ಬಿಡಿ: ಪ್ರಲ್ಹಾದ ಜೋಶಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ನವೆಂಬರ್ 2025, 9:34 IST
Last Updated 8 ನವೆಂಬರ್ 2025, 9:34 IST
<div class="paragraphs"><p>ಪ್ರಲ್ಹಾದ ಜೋಶಿ, ಸಿದ್ದರಾಮಯ್ಯ </p></div>

ಪ್ರಲ್ಹಾದ ಜೋಶಿ, ಸಿದ್ದರಾಮಯ್ಯ

   

ಬೆಂಗಳೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಕೇಂದ್ರವನ್ನು ದೂಷಿಸುತ್ತಾ ರಾಜ್ಯದ ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಹೇಳಿದ್ದಾರೆ.

ಈ ಕುರಿತು ಸಿದ್ದರಾಮಯ್ಯ ಅವರಿಗೆ ಸುದೀರ್ಘ ಪತ್ರ ಬರೆದಿರುವ ಅವರು, ಈ ಪತ್ರವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

ADVERTISEMENT

‘ರೈತರ ಕಲ್ಯಾಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ. ದೇಶದಲ್ಲಿ ಕಬ್ಬು ಬೆಳೆಗಾರರಿಗೆ ಸಹಾಯ ಮಾಡಲು ಮತ್ತು ಪ್ರಯೋಜನ ಪಡೆಯಲು ವಿವಿಧ ಕಾರ್ಯಕ್ರಮಗಳನ್ನು ಪರಿಚಯಿಸಲಾಗಿದೆ. 2022–23 ಮತ್ತು 2023–24ನೇ ಮಾರುಕಟ್ಟೆ ವರ್ಷದಲ್ಲಿ ಕೇಂದ್ರವು ಕಬ್ಬು ಬೆಳೆಗಾರರಿಗೆ ನೀಡಬೇಕಿರುವ ಬಾಕಿ ಮೊತ್ತವು ಶೂನ್ಯವಾಗಿದೆ.2024-25ನೇ ಮಾರುಕಟ್ಟೆ ವರ್ಷದಲ್ಲಿ ₹50 ಲಕ್ಷಗಳಷ್ಟಿದೆ’ ಎಂದಿದ್ದಾರೆ.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರದತ್ತ ಬೆರಳು ತೋರಿಸುತ್ತಾ, ರಾಜ್ಯದ ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ. ಇದು ಅನ್ಯಾಯವಷ್ಟೇ ಅಲ್ಲ ಕ್ರೂರ ಹಾಸ್ಯವಾಗಿದೆ’ ಎಂದು ಕಿಡಿಕಾರಿದ್ದಾರೆ.

ಏತನ್ಮಧ್ಯೆ, ಸಕ್ಕರೆ ಕಾರ್ಖಾನೆ ಮಾಲೀಕರು, ರೈತ ಮುಖಂಡರ ಜತೆ ನಡೆಸಿದ ಸುದೀರ್ಘ ಮಾತುಕತೆ ಬಳಿಕ ರಾಜ್ಯ ಸರ್ಕಾರ, ಪ್ರತಿ ಟನ್‌ ಕಬ್ಬಿಗೆ ₹3,300 ದರ ನಿಗದಿ ಮಾಡಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.