
ಕಬ್ಬಿನ ಗಾಡಿಗಳಿಗೆ ಬೆಂಕಿ
ಬೆಂಗಳೂರು: ಬಾಗಲಕೋಟೆ ಜಿಲ್ಲೆಯಲ್ಲಿ ಕಬ್ಬಿಗೆ ಬೆಂಕಿ ಹಚ್ಚಿದ ಪ್ರಕರಣ ಕುರಿತು ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮಾಜಿ ಪ್ರಧಾನಿ ಪಂಡಿತ್ ಜವಾಹಾರಲಾಲ್ ನೆಹರೂ ಜನ್ಮದಿನದ ಅಂಗವಾಗಿ ವಿಧಾನಸೌಧದ ಮುಂಭಾಗದ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಟ್ರ್ಯಾಕ್ಟರ್‌ಗಳಿಗೆ ಬೆಂಕಿ ಹಚ್ಚಿರುವ ಪ್ರಕರಣಕ್ಕೆ ಕಬ್ಬು ಬೆಳೆಗಾರರು ಕಾರಣರಲ್ಲ ಎಂದು ಸಂಘದ ಮುಖಂಡರು ಹೇಳಿದ್ದಾರೆ. ಹಾಗಾಗಿ, ಸೂಕ್ತ ತನಿಖೆಯ ಅಗತ್ಯವಿದೆ. ತನಿಖೆಯ ನಂತರ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಜರುಗಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಕಬ್ಬಿನ ದರ ನಿಗದಿ ಮಾಡುವುದು ಕೇಂದ್ರ ಸರ್ಕಾರ. ರೈತರ ಹಿತಾಸಕ್ತಿ ಗಮನದಲ್ಲಿ ಇಟ್ಟುಕೊಂಡು ಕಾರ್ಖಾನೆ ಮಾಲೀಕರ ಜತೆ ಸಭೆ ನಡೆಸಿ, ಪರಿಷ್ಕೃತ ದರ ನಿಗದಿ ಮಾಡಲಾಗಿತ್ತು. ಸಾಗಣೆ ವೆಚ್ಚ ಒಳಗೊಂಡು ಕೇಂದ್ರ ಸರ್ಕಾರ ನಿಗದಿ ಮಾಡಿದ ದರಕ್ಕಿಂತ ಹೆಚ್ಚು ನೀಡಲು ಕಾರ್ಖಾನೆಗಳ ಮಾಲೀಕರು ಒಪ್ಪಿಕೊಂಡಿದ್ದಾರೆ. ಸರ್ಕಾರ ಪ್ರತಿ ಟನ್‌ಗೆ ನಿಗದಿ ಮಾಡಿದ ₹3,300 ದರ ಒಪ್ಪಿಕೊಂಡು ರೈತರು ಚಳವಳಿ ಹಿಂಪಡೆಯಬೇಕು ಎಂದು ಮನವಿ ಮಾಡಿದರು.
ಸಮೀರವಾಡಿಯ ಗೋದಾವರಿ ಬಯೋ ರಿಫೈನರಿ ಕಾರ್ಖಾನೆಯ ಕಬ್ಬು ಸಂಗ್ರಹದ ಅಂಗಳದಲ್ಲಿ ನಿಂತಿದ್ದ 50ಕ್ಕೂ ಹೆಚ್ಚು ಕಬ್ಬಿನ ಟ್ರ್ಯಾಕ್ಟರ್‌ಗಳಿಗೆ ಕಿಡಿಗೇಡಿಗಳು ಗುರುವಾರ ಬೆಂಕಿ ಹಚ್ಚಿದ್ದರು. ಇದರಿಂದ ಕೋಟ್ಯಂತರ ರೂಪಾಯಿ ನಷ್ಟವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.