ADVERTISEMENT

ಕಬ್ಬಿಗೆ ಹೆಚ್ಚುವರಿ ಬೆಲೆ ನಿಗದಿ: ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2025, 0:30 IST
Last Updated 20 ಡಿಸೆಂಬರ್ 2025, 0:30 IST
<div class="paragraphs"><p>ಕಬ್ಬು</p></div>

ಕಬ್ಬು

   

ಬೆಂಗಳೂರು: ರಾಜ್ಯದಲ್ಲಿ ಟನ್ ಕಬ್ಬಿಗೆ ಎಫ್ಆರ್‌ಪಿ ಅಡಿಯಲ್ಲಿ ಹೆಚ್ಚುವರಿಯಾಗಿ ₹100 ನಿಗದಿಪಡಿಸಿರುವ ರಾಜ್ಯ ಸರ್ಕಾರದ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ.

‘ನ್ಯಾಯಸಮ್ಮತ ಮತ್ತು ಲಾಭದಾಯಕ ದರ ನಿಗದಿಪಡಿಸಿ  ನ.8ರಂದು ಹೊರಡಿಸಿರುವ ಆದೇಶ ರದ್ದುಪಡಿಸಬೇಕು’ ಎಂದು ಕೋರಿ ‘ದಕ್ಷಿಣ ಭಾರತದ ಸಕ್ಕರೆ ಕಾರ್ಖಾನೆಗಳ ಸಂಘದ ಕಾರ್ಯದರ್ಶಿ ಎಲ್‌.ಸೋಮೇಶ್‌ ಸೇರಿ ಆರು ಸಕ್ಕರೆ ಕಾರ್ಖಾನೆಗಳ ಪರವಾಗಿ ಸಲ್ಲಿಸಿರುವ ರಿಟ್‌ ಅರ್ಜಿಗಳನ್ನು ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ಅವರಿದ್ದ ನ್ಯಾಯಪೀಠವು ವಿಚಾರಣೆ ನಡೆಸಿತು.

ADVERTISEMENT

ವಾದ ಆಲಿಸಿದ ನ್ಯಾಯಪೀಠ, ‘ಸಕ್ಕರೆ ಕಾರ್ಖಾನೆಗಳವರು ಕಬ್ಬು ನಿಯಂತ್ರಣ ಮಂಡಳಿಗೆ ಹತ್ತು ದಿನಗಳಲ್ಲಿ ಮನವಿ ಸಲ್ಲಿಸಬೇಕು. ಇದನ್ನು 4 ವಾರಗಳಲ್ಲಿ ಇತ್ಯರ್ಥಗೊಳಿಸಬೇಕು’ ಎಂದು ಆದೇಶಿಸಿ 2026ರ ಫೆಬ್ರುವರಿ ಮೊದಲ ವಾರಕ್ಕೆ ವಿಚಾರಣೆ ಮುಂದೂಡಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.