ಸಿದ್ದರಾಮಯ್ಯ
– ಪ್ರಜಾವಾಣಿ ಚಿತ್ರ
ಬೆಂಗಳೂರು: ‘ಸಕ್ಕರೆ ಕಾರ್ಖಾನೆ ಮಾಲೀಕರ ಸಮ್ಮುಖದಲ್ಲಿಯೇ ಪ್ರತಿ ಟನ್ ಕಬ್ಬಿಗೆ ₹ 3,300 ದರ ನಿಗದಿ ಮಾಡಲಾಗಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕಬ್ಬಿನ ದರ ನಿಗದಿ ಬಗ್ಗೆ ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ಧಾರದ ಕುರಿತು ಮಾಜಿ ಸಚಿವ ಮುರುಗೇಶ್ ನಿರಾಣಿ ಸೇರಿದಂತೆ ಸಕ್ಕರೆ ಕಾರ್ಖಾನೆ ಮಾಲೀಕರು ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಅವರೆಲ್ಲರ ಸಮ್ಮುಖದಲ್ಲಿಯೇ ಈ ತೀರ್ಮಾನ ಆಗಿದೆ’ ಎಂದರು.
‘ಕಬ್ಬು ಬೆಳೆಗಾರರಿಗೆ ಕಾರ್ಖಾನೆ ಮಾಲೀಕರು ₹ 50 ಕೊಡಬೇಕೆಂದು ಬಹಳ ಸ್ಪಷ್ಟವಾಗಿ ತಿಳಿಸಲಾಗಿದೆ. ಪ್ರೋತ್ಸಾಹಧನವಾಗಿ ಸರ್ಕಾರ ₹ 50 ಪಾವತಿಸಲಿದೆ. ಶೇ 10.25 ಇಳುವರಿ ಪ್ರಮಾಣ ಇದ್ದರೆ ₹ 3,100 ಜೊತೆಗೆ ₹ 100 ಹಾಗೂ ಶೇ 11.25 ಇಳುವರಿ ಪ್ರಮಾಣ ಇದ್ದರೆ ₹ 3,200 ಜೊತೆಗೆ ₹ 100 ನೀಡಲಾಗುವುದು’ ಎಂದರು.
‘ಕಬ್ಬು ಬೆಳೆಗಾರರ ಇತರ ವಿಚಾರಗಳ ಬಗ್ಗೆ ಪ್ರತ್ಯೇಕ ಸಭೆ ನಡೆಸಲು ತೀರ್ಮಾನಿಸಲಾಗಿದೆ’ ಎಂದೂ ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.