ADVERTISEMENT

ಮುರುಗೇಶ ನಿರಾಣಿ ಪುತ್ರನ ವಿರುದ್ಧ ತನಿಖೆಗೆ ಸುಪ್ರೀಂ ಕೋರ್ಟ್‌ ಅನುಮತಿ

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2025, 16:15 IST
Last Updated 26 ಆಗಸ್ಟ್ 2025, 16:15 IST
ಮುರುಗೇಶ ನಿರಾಣಿ
ಮುರುಗೇಶ ನಿರಾಣಿ   

ನವದೆಹಲಿ: ಮುಧೋಳದ ನಿರಾಣಿ ಶುಗರ್ಸ್‌ನ ಡಿಸ್ಟಿಲರಿ ಘಟಕದ ಎಫ್ಲ್ಯುಯೆಂಟ್‌ ಟ್ರೀಟ್‌ಮೆಂಟ್ ಪ್ಲಾಂಟ್‌ನ (ಇಟಿಪಿ) ಬಾಯ್ಲರ್ ಸ್ಫೋಟಗೊಂಡು ನಾಲ್ವರು ಕಾರ್ಮಿಕರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮಾಜಿ ಸಚಿವ ಮುರುಗೇಶ ನಿರಾಣಿ ಅವರ ಪುತ್ರ ವಿಜಯ್ ನಿರಾಣಿ ಮತ್ತು ಇತರರ ವಿರುದ್ಧ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಮಂಗಳವಾರ ಅವಕಾಶ ನೀಡಿದೆ. 

ಈ ಪ್ರಕರಣದ ವಿಚಾರಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ 2023 ರ ಆದೇಶವನ್ನು ನ್ಯಾಯಮೂರ್ತಿಗಳಾದ ಸಂಜಯ್ ಕರೋಲ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ರದ್ದುಗೊಳಿಸಿದೆ.

ಕರ್ನಾಟಕ ಸರ್ಕಾರದ ಪರವಾಗಿ ವಕೀಲ ಡಿ.ಎಲ್. ಚಿದಾನಂದ ಸಲ್ಲಿಸಿದ ಮನವಿಯ ಆಧಾರದಲ್ಲಿ ಪ್ರಕರಣದ ವಿಚಾರಣೆ ನಡೆಸಿದ ಪೀಠವು, ವಿಚಾರಣೆ ನಡೆಸಲು ಅನುಮತಿ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ.

ADVERTISEMENT

ಮುಂದಿನ ವಿಚಾರಣೆಗಾಗಿ ಈ ವಿಷಯವನ್ನು ವಿಚಾರಣಾ ನ್ಯಾಯಾಲಯಕ್ಕೆ ಹಿಂತಿರುಗಿಸಿತು.

ಕಂಪನಿಯ ನಿರ್ದೇಶಕ ವಿಜಯ್ ನಿರಾಣಿ ಮತ್ತು ಇತರರ ವಿರುದ್ಧ ಇನ್‌ಸ್ಪೆಕ್ಟರ್‌ 2019 ರಲ್ಲಿ ಪ್ರಕರಣ ದಾಖಲಿಸಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.