ಹನೂರು: ತಾಲ್ಲೂಕಿನ ಸುಳ್ವಾಡಿ ಕಿಚ್ಚುಗುತ್ತು ಮಾರಮ್ಮನ ದೇವಾಲಯದಲ್ಲಿ ಪ್ರಸಾದಕ್ಕೆ ವಿಷ ಬೆರೆಸಿ ಜನರ ಸಾವಿಗೆ ಕಾರಣರಾಗಿದ್ದ ಇಬ್ಬರು ಆರೋಪಿಗಳನ್ನು ಗುರುವಾರ ಪೊಲೀಸರು ಸ್ಥಳ ಮಹಜರು ನಡೆಸಿದರು.
ಭಕ್ತರಿಗೆ ಹಂಚಿದ್ದ ಪ್ರಸಾದದಲ್ಲಿ ವಿಷ ಬೆರೆಸಿದ್ದ ದೊಡ್ಡಯ್ಯ ಹಾಗೂ ಮಾದೇಶ ಅವರನ್ನು ಡಿವೈಎಸ್‌ಪಿ ಪುಟ್ಟಮಾದಯ್ಯ ನೇತೃತ್ವದ ತನಿಖಾ ತಂಡ ಸಂಜೆ 4ರ ಸುಮಾರಿಗೆ ದೇವಾಲಯಕ್ಕೆ ಕರೆತಂದು, ಪ್ರಸಾದ ಸಿದ್ಧಪಡಿಸಿದ್ದ ಅಡುಗೆಮನೆಯಲ್ಲಿ ಮಹಜರು ಮಾಡಿ ಪರಿಶೀಲನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.