ಸುಳ್ಯ ಬಳಿ ಕಾರು–ಲಾರಿ ನಡುವೆ ಅಪಘಾತ: ಗೋಣಿಕೊಪ್ಪ ಮೂಲದ ನಾಲ್ವರ ಸಾವು
ಸುಳ್ಯ (ದಕ್ಷಿಣ ಕನ್ನಡ): ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೊಯನಾಡು-ದೇವರಕೊಲ್ಲಿ ಮಧ್ಯೆ ಲಾರಿ ಮತ್ತು ಕಾರಿನ ನಡುವೆ ಇಂದು ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ಕು ಜನ ಮೃತಪಟ್ಟಿದ್ದಾರೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ಕೂ ಜನ ಮೃತಪಟ್ಟವರು ಎಂದು ತಿಳಿದು ಬಂದಿದೆ.
ಗಂಭೀರ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿದ್ದ ಗಾಯಾಳುಗಳನ್ನು ಆಂಬುಲೆನ್ಸ್ ಮೂಲಕ ಸುಳ್ಯದ ಕೆವಿಜಿ ಆಸ್ಪತ್ರೆಗೆ ಕರೆ ತರುವಾಗಲೇ ಮೃತರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಅಪಘಾತದಲ್ಲಿ ಮೃತಪಟ್ಟವರು ಕೊಡಗು ಜಿಲ್ಲೆಯ ಗೋಣಿಕೊಪ್ಪ ಮೂಲದವರು ಎಂದು ತಿಳಿದು ಬಂದಿದೆ. ಮೃತದೇಹಗಳನ್ನು ಕೆವಿಜಿ ಮೆಡಿಕಲ್ ಕಾಲೇಜಿನ ಶವಾಗಾರದಲ್ಲಿ ಇರಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.