ADVERTISEMENT

ಭಾನುವಾರ ಸಂಪೂರ್ಣ ಲಾಕ್‌ಡೌನ್‌

​ಪ್ರಜಾವಾಣಿ ವಾರ್ತೆ
Published 29 ಮೇ 2020, 20:30 IST
Last Updated 29 ಮೇ 2020, 20:30 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಇದೇ 31ರ ಭಾನುವಾರವೂ ಸಂಪೂರ್ಣ ಲಾಕ್‌ಡೌನ್‌ ಇರಲಿದೆ.ಅಗತ್ಯ ಸೇವೆ ಹೊರತು ಪಡಿಸಿ ಉಳಿದೆಲ್ಲ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಶನಿವಾರ ಸಂಜೆ 7ರಿಂದ ಸೋಮವಾರ ಬೆಳಿಗ್ಗೆ 7ರವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ.

ಮೇ 31ರವರೆಗೆ 4.0 ಲಾಕ್‌ಡೌನ್‌ ಘೋಷಿಸಿದ್ದರೂ, ವಾರದ ದಿನಗಳಲ್ಲಿ ಎಲ್ಲ ಚಟುವಟಿಕೆಗೆ ಅವಕಾಶ ನೀಡಲಾಗಿತ್ತು. ಆದರೆ, ಪ್ರತಿ ಭಾನುವಾರ ಮಾತ್ರ ಸಂಪೂರ್ಣ ಲಾಕ್‌ಡೌನ್ ಎಂದು ಘೋಷಿಸಲಾಗಿದೆ.

ಮದುವೆಗೆ ಅನುಮತಿ: ಪೂರ್ವ ನಿಗದಿತ ಮದುವೆ ಸಮಾರಂಭಗಳನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಲಾಗಿದೆ. ಅಂತರ ಕಾಯ್ದುಕೊಂಡು ಗರಿಷ್ಠ 50 ಅತಿಥಿಗಳ ಸಂಖ್ಯೆ ಮೀರದಂತೆ ಸರಳವಾಗಿ ಮದುವೆ ಮಾಡಲು ಅನುಮತಿ ನೀಡಲಾಗಿದೆ.

ADVERTISEMENT

‘ಸಡಿಲಿಕೆಗಿಂತಲೂ ಮೊದಲಿದ್ದ ಮಾದರಿಯಲ್ಲಿಯೇ ಸಂಪೂರ್ಣ ಲಾಕ್‌ಡೌನ್‌ ಇರುತ್ತದೆ. ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿಗೆ ಬರಲಿದೆ. ಕರ್ಫ್ಯೂ ಅವಧಿಯಲ್ಲಿ ರಾಜ್ಯದಾದ್ಯಂತ ಬಿಗಿ ಭದ್ರತೆ ಇರಲಿದೆ. ಅವಶ್ಯಕ ವಸ್ತುಗಳ ಅಂಗಡಿಗಳನ್ನು ಬಿಟ್ಟು ಉಳಿದ ಅಂಗಡಿಗಳನ್ನು ತೆರೆಯುವಂತಿಲ್ಲ. ಅನಗತ್ಯವಾಗಿ ಓಡಾಡುವಂತಿಲ್ಲ. ತಪ್ಪಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಅಧಿಕಾರಿಗಳು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.